ಜೆಡಿಎಸ್ ಪಕ್ಷಕ್ಕೆ ಸೇರಿದ ನ್ಯಾಯವಾದಿ ವಾಲಿಕಾರ..!
ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ ಹಿರಿಯ ನ್ಯಾಯವಾದಿ ವಾಲಿಕಾರ..!
ಇಂಡಿ : 2024 ರ ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮೈತ್ರಿ ಪಕ್ಷದ ಸಮಯನ್ವ ಸಮಿತಿಯ ಕಾರ್ಯಕ್ರಮದಲ್ಲಿ ನ್ಯಾಯವಾದಿ ಎಸ್ ಜೆ ವಾಲಿಕಾರ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗುರುವಾರ ಪಟ್ಟಣದ ಶಾಂತೇಶ್ವರ ಮಂಗಲಕಾರ್ಯದಲ್ಲಿ ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ ಸಂಸದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ, ಜೆಡಿಎಸ್ ಪಕ್ಷದ ಮುಖಂಡ ಬಿ.ಡಿ. ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ. ಜಿ. ಪಾಟೀಲ, ಆರ್ ಕೆ ಪಾಟೀಲ ಶ್ರೀಶೈಲಗೌಡ ಬಿರಾದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.