ರಾಯಚೂರು.ಫೆ.೨೦- ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ನೂರ್ ಜಹಾರ್ ಖಾನೂಮ್ ಅವರನ್ನು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿ, ರಾಜ್ಯ ಸರ್ಕಾರ ಆದೇಶಿಸುವ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ವರ್ಗಾವಣೆಯನ್ನು ತಿದ್ದುಪಡಿ ಮಾಡಿದೆ.
ನೂರ್ ಜಹಾರ್ ಖಾನೂಮ್ ಅವರನ್ನು ಕಳೆದ ಮೂರು ತಿಂಗಳ ಹಿಂದೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾಯಿಸಲಾಗಿತ್ತು. ಆದರೆ, ಈ ವರ್ಗಾವಣೆ ಆದೇಶದ ಮೂರು ತಿಂಗಳ ಅವಧಿಯಲ್ಲಿಯೇ ರಾಜ್ಯ ಸರ್ಕಾರ ಹಿಂದಿನ ಆದೇಶ ತಿದ್ದುಪಡಿ ಮಾಡಿ, ಫೆ.೧೯ ರಂದು ಮತ್ತೊಂದು ಆದೇಶ ಹೊರಡಿಸಿದೆ.
ನೂರ್ ಜಹಾರ್ ಖಾನೂಮ್ ಅವರನ್ನು ಈ ಹಿಂದೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾಯಿಸಲಾಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹುದ್ದೆಗೆ ಐಎಎಸ್ ಅಧಿಕಾರಿಯನ್ನೇ ನಿಯುಕ್ತಿಗೊಳಿಸುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆಂದು ಹೇಳಲಾಗುತ್ತಿದೆ.
ಸರ್ಕಾರದ ತಿದ್ದುಪಡಿ ಆದೇಶದಲ್ಲಿ ನೂರ್ ಜಹಾರ್ ಖಾನೂಮ್ ಅವರನ್ನು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯ ಉಸ್ತುವಾರಿಯನ್ನು ನೀಡಲಾಗಿದೆ.