ರಾಯಚೂರು : ಜಿಲ್ಲೆಯಲ್ಲಿ ದಿನ ದಿನೆ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇಂದು 323 ಹೊಸ ಕೊರೊನಾ ಪಾಟಿಸಿವ್ ಪ್ರಕರಣಗಳು ವರದಿಯಾಗಿವೆ.
ರಾಯಚೂರು ತಾಲೂಕಿನಲ್ಲಿ 136, ಮಾನವಿ 5, ಲಿಂಗಸೂಗೂರು 11, ಸಿಂಧನೂರು 16, ದೇವದುರ್ಗ 12 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಂಖ್ಯೆ 1674 ತಲುಪಿದೆ. 40 ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ, ಕೋವಿಡ್ ಆಸ್ಪತ್ರೆಯಲ್ಲಿ 8 ಜನ ಹಾಗೂ 1592 ಜನ ಹೋಮ್ ಐಸೋಲೋಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿತ್ಯ 300ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ಸಹ ಕೋವಿಡ್ ನಿಯಮಗಳನ್ನು ಅನುಸರಿಸಬೇಕಾಗಿರುವುದು ಅಗತ್ಯವಿದೆ.