ಜು.26ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಉದ್ಯೊಗ ಮೇಳ
ವಿಜಯಪುರ,ಜುಲೈ 20 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಇವರ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜು.26ರಂದು ಬೆಳಿಗ್ಗೆ 10 ಗಂಟೆಗೆ ಬಬಲೇಶ್ವರ ತಾಲೂಕಿನ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಉದ್ಯೊಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೋಮಾ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿ ಪಾಸಾದಂತಹ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಬಯೋಡೆಟಾ ಆಧಾರ ಪ್ರತಿಗಳ 2 ಸೆಟ್ ಝರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8748991787, 9945000793 ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.