16ನೇ ರಾಷ್ಟಿçÃಯ ಮತದಾರ ದಿನಾÀಆಚರಣೆ
ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ ಕರೆ
ವಿಜಯಪುರ ಜ.25 : ದೇಶದ ಅಭ್ಯುದಯಕ್ಕೆ ಮತದಾನದಿಂದ ಯಾರೂ ಹೊರಗುಳಿಯದೇ ಎಲ್ಲ ಅರ್ಹ ಮತದಾರರು ಸಂವಿಧಾನ ಕೊಡಮಾಡಿದ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಕರೆ ನೀಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನನ್ನ ಭಾರತ-ನನ್ನ ಮತ ಎಂಬ ಘೋಷ ವಾಕ್ಯದಡಿ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ನಮಗೆ ನೀಡಿರುವ ಮತದಾನದ ಹಕ್ಕನ್ನು ದುರ್ಬಳಕೆ ಮಾಡಿಕೊಳ್ಳದೇ, ಸದುಪಯೋಗ ಪಡೆದು ನಿಷ್ಠೆ, ಪ್ರಾಮಾಣಿಕತೆಯಿಂದ ಮತದಾನ ಮಾಡುವ ಮನೋಭಾವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.
ಯುವ ಅರ್ಹ ಮತದಾರರು ಮತದಾನದಿಂದ ವಂಚಿತರಾಗದೇ ಕಡ್ಡಾಯವಾಗಿ ತಮ್ಮ ಮತವನ್ನು ಚಲಾಯಿಸಬೇಕು.ನನ್ನೊಂದು ಮತದಿಂದ ಏನಾಗುತ್ತದೆ ಎಂಬ ಉದಾಸೀನತೆ ಹೊಂದದೇ ನಮ್ಮ ಮತ ಮೌಲ್ಯವನ್ನು ಅರಿತು, ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಕಟುಂಬ ಸಮೇತರಾಗಿ ಪಾಲ್ಗೊಳ್ಳಬೇಕು. ನಮ್ಮ ಜವಾಬ್ದಾರಿ ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶದ ಅಭಿವೃದಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಮಾತನಾಡಿ, ನಮ್ಮದು ಪ್ರಜಾಪ್ರಭುತ್ವ ದೇಶವಾಗಿದ್ದು, ಜಗತ್ತಿನಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವವ ವ್ಯವಸ್ಥೆ ಹೊಂದಿದ ರಾಷ್ಟçವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಭದ್ರ ಬುನಾದಿಯಾಗಿದೆ. ಮತದಾರರು ಚುನಾವಣೆಯಲ್ಲಿ ಅತೀ ಮುಖ್ಯವಾದ ಪಾತ್ರ ವಹಿಸುತ್ತಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಚುನಾವಣೆಯನ್ನು ನಡೆಸುವುದು ದೊಡ್ಡ ಜವಾಬ್ದಾರಿಯಾಗಿದೆ. ನಮ್ಮ ಸಂವಿಧಾನದಲ್ಲಿ ಮತದಾನ ಮಾಡುವ ಹಕ್ಕನ್ನು ಎಲ್ಲ 18 ವರ್ಷ ತುಂಬಿದವರಿಗೆ ನೀಡಿದೆ. ಅರ್ಹ ಮತದಾರರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸುವ ಮೂಲಕ ಮತದಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಮತದಾರರಲ್ಲಿ ಸೂಕ್ತ ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಮತದಾರರ ದಿನವನ್ನು ಆಚರಣೆ ಮಾಡುತ್ತಿದ್ದೇವೆ. 18 ವರ್ಷ ತುಂಬಿದ ಅರ್ಹರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಕೊಳ್ಳಬೇಕು. ಚುನಾವಣಾ ಆಯೋಗ ಈ ಪ್ರಕ್ರಿಯಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ಆಯೋಗದ ವೆಬ್‌ಸೈಟ್ ಮೂಲಕ ನಿಗದಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿದರೆ ಬಿಎಲ್‌ಒ ಅವರು ತಮ್ಮ ಮನೆ ಬಾಗಿಲಿಗೆ ಆಗಮಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮವಹಿಸುವರು. ಮತದಾನದÀ ಮಾಡುವ ಕುರಿತು ಪ್ರತಿಯೊಬ್ಬರಲ್ಲಿ ಜಾಗೃತಿ, ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಸಾಕ್ಷರತಾ ಕ್ಲಬ್, ಸ್ವೀಪ್ ಸಮಿತಿ ಮತದಾನ ಮಹತ್ವ ಸಾರುವ ವಿವಿಧ ಸ್ಪರ್ಧೆ ಏರ್ಪಡಿಸಿ ಯುವಕರಲ್ಲಿ ಹಾಗೂ ನಾಗರಿಕರಲ್ಲಿ ಅರಿವು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರು ಸಂವಿಧಾನದ ಮೂಲಕ ದತ್ತವಾದ ಅಧಿಕಾರವನ್ನು ಚಲಾಯಿಸಿ ನಮ್ಮ ಬದ್ಧತೆ ಮೆರೆಯಬೇಕು ಎಂದು ಹೇಳಿದರು. ಚುನಾವಣಾ ಆಯೋಗವು ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳಿಗೆ ಮತದಾನದಿಂದ ಹೊರಗುಳಿಯದಂತೆ ಅನೇಕ ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಮತದಾನ ಪ್ರಕ್ರಿಯೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಪಾತ್ರ ಬಹು ಮುಖ್ಯವಾಗಿದೆ. ಮಹಿಳೆಯರು ಮತದಾನ ಮಹತ್ವ ತಿಳಿದುಕೊಳ್ಳಬೇಕು. ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ನಾವೆಲ್ಲರೂ ಪಾಲನೆ ಮಾಡೋಣ. ಮತದಾನ ಸಂದರ್ಭದಲ್ಲಿ ತಮ್ಮ ಕಾರ್ಯ ಕೆಲಸದ ನಿಮಿತ್ಯ ಬೇರೆಡೆ ತೆರಳದೆ ತಮಗೆ ಸಂಬAಧಿಸಿದ ಮತಗಟ್ಟೆಗೆ ತೆರಳಿ ಕಡ್ಡಾಯ ಮತದಾನ ಮಾಡಿ, ಸಂವಿಧಾನ ಬದ್ಧ ಹಕ್ಕನ್ನು ನಿಷ್ಠೆಯಿಂದ ಚಲಾಯಿಸೋಣ. ಇದು ಎಲ್ಲ ನಾಗರಿಕರ ಜವಾಬ್ದಾರಿ ಹಾಗೂ ಕರ್ತವ್ಯವೂ ಆಗಿದೆ ಎಂದು ಹೇಳಿದರು.
ವಿ.ಎಂ ಆಲಗೂರ ಅವರು ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸ್ವಾಗತಿಸಿ, ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿರುವ ಬಿಎಲ್‌ಒ ಅವರಿಗೆ ಸನ್ಮಾನಿಸಲಾಯಿತು. ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಯುವ ಮತದಾರರಿಗೆ ಸಾಂಕೇತಿಕವಾಗಿ ಚುನಾವಣಾ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಜಿಲ್ಲಾ ಮಟ್ಟದ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


















