ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿ : ಅರ್ಜಿ ಆಹ್ವಾನ
ವಿಜಯಪುರ ನ.22 : ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕನ್ನಡ ಅಭಿವೃದ್ದಿ ಯೋಜನೆಯಡಿ ಪ್ರಸಕ್ತ 2024-25ನೇ ಸಾಲಿನ ಅಂಚೆ ಮೂಲಕ ಕನ್ನಡ ಶಿಕ್ಷಣದ ತರಬೇತಿಗಾಗಿ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಭಾಷಾ ಸಂಸ್ಥೆ ಮಾನಸ ಗಂಗೋತ್ರಿ ಹಾಗೂ ಮೈಸೂರು ಈ ಸಂಸ್ಥೆಯಿಂದ 38ನೇ ತಂಡದ ತರಬೇತಿ ಆರಂಭಿಸಲಿದೆ. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೊಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಯಿದೆ. ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ 18 ರಿಂದ 50 ವಯಸ್ಸಿನ ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯ ಜೊತೆಯಲ್ಲಿ 250 ರೂ. ಡಿಡಿ ಸಲ್ಲಿಸಬೇಕು. ನೊಂದಣಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : 30-11-2024 ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ:0821-2345128 ಇವರಿಗೆ ಐದು ರೂಪಾಯಿ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.