ಬಾಗಲಕೋಟೆ: ಆಧುನಿಕ ಸೂಫಿ ಸಂತ, ಕನ್ನಡದ ಕಬೀರ, ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಾಕಾರ ಮೂರ್ತಿ, ಸರ್ವಧರ್ಮ ಸಮನ್ವಯ ಪ್ರವಚನಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಇಬ್ರಾಹಿಂ ಸುತಾರ್ (80) ಅವರು ನಿಧನ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಸುತಾರ್ ರವರು ನಿಧನ ಹೊಂದಿದ್ದಾರೆ. ಸಂತರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.