ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆ ಹತ್ತಿರ ಬರುವ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಬೆಂಗಳೂರು(ಕೆಯುಡಬ್ಲುಜೆ)ದ ಕಾನಿಪ ಸಂಘ ಮುದ್ದೇಬಿಹಾಳ ತಾಲೂಕು ಘಟಕದಿಂದ ಶನಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ಬಸವರಾಜ ಈ ಕುಂಬಾರ ಅವರ ಪುತ್ರಿ ಕುಮಾರಿ ಭಾಗ್ಯಶ್ರೀ ಬಸವರಾಜ ಕುಂಬಾರ ಇವರಿಗೆ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ ಎಸ್ ಪಾಟೀಲ (ನಡಹಳ್ಳಿ) ಭಾಗ್ಯಶ್ರೀಗೆ ಇವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾನಿಪ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಡಿ ಬಿ ವಡವಡಗಿ, ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಕಾಲೇಜಿನ ಪ್ರಾಂಶುಪಾಲ ಪ್ರೊ|ವಿಫುಲ್ ಸಗರಿ, ಪ್ರೋ ರಾಜ ನಾರಾಯಣ ನಲವಡೆ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ,ಕಾನಿಪ ಸಂಘದ ತಾಲೂಕು ಅಧ್ಯಕ್ಷ ಆರ್.ಬಿ.ವಡವಡಗಿ(ಮುತ್ತು) ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ,ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ನೂರೇನಬಿ ನದಾಫ,ಕಾನಿಪ ಸಂಘದ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.