VOJ NEWS DESK BANGALORE : ಕಟುಕ, ಕಟಕ ಮತಿತರ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಮಾಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ರಾಜ್ಯ ಕಟಕ ಸಮಾಜದ ನಿಯೋಗ, ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.
ಕಟುಕ, ಕಟಕ ಮತಿತರ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ನಿಯೋಗ ಮನವಿ ಮಾಡಿತು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕುರಿ, ಮೇಕೆ ಮಾಂಸ ಕಡಿಯುವುದು ಸಮಾಜದ ಕಸುಬು. ಹೀಗಾಗಿ ಕಟುಕ ಅಂಟಿಕೊಂಡಿದ್ದು, ಎನ್ನುವ ಹೆಸರು ಸಮಾಜಕ್ಕೆ ಸಾಮಾಜಿಕವಾಗಿ ಬಹಳ
ಹಿಂದುಳಿದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗೆ ಕಟಕ ಸಮಾಜ ಸೇರಿಸಲ್ಪಟ್ಟಿದೆ. ದೆಹಲಿ, ರಾಜಸ್ತಾನ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿಯೂ ಪರಿಶಿಷ್ಟ ಜಾತಿಗೆ ಸೇರಲ್ಪಟ್ಟಿದೆ.
2012 ರಲ್ಲಿ ಕುಲಶಾಸ್ತ್ರೀಯ ಅಧ್ಯಯನದಲ್ಲಿಯೂ ಸಮುದಾಯದ ಕುರಿತು ಸಷ್ಟವಾಗಿ ನಮೂದಾಗಿದೆ. ಕರ್ನಾಟಕದಲ್ಲಿಯೂ ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಸಮಾಜದ ಮಾಡಿದರು. ಮುಖಂಡರು ಮನವರಿಕ
ಕಟಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕಟಕ ಸಮಾಜದ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್.ಕೆ. ಸಿದ್ರಾಮಣ್ಣ ಮನವಿ ಮಾಡಿದರು. ಮಾಜಿ ಶಾಸಕ ಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ನಸೀರ್ ಅಹ್ಮದ್ ಉಪಸ್ಥಿತರಿದ್ದರು.