VOJ ನ್ಯೂಸ್ ಡೆಸ್ಕ್ :ಪಂಜಾಬ್ ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ ಉತ್ಸಾಹದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಇಂದು ಹೊಸ ಸವಾಲನ್ನು ಎಸೆದಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುನ್ಸಿಪಲ್ ಚುನಾವಣೆಯನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಾ ಕೇಜ್ರಿವಾಲ್ ಈ ಸವಾಲನ್ನು ಎಸೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಸಮಯಕ್ಕೆ ಸರಿಯಾಗಿ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷ ಎಂಸಿಡಿಯಲ್ಲಿ ಬಿಜೆಪಿಯನ್ನು ಕೆಳಗಿಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ಕೇಜ್ರಿವಾಲ್ ಅವರು ತಮ್ಮ ಆಮ್ ಆದ್ಮಿ ಪಕ್ಷವು ನಾಗರಿಕ ಚುನಾವಣೆಯಲ್ಲಿ ಸೋತರೆ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದಾರೆ.