• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನ : ವಿಧಾನಸಭಾ ಅಧ್ಯಕ್ಷ

      Voiceofjanata.in

      December 24, 2024
      0
      ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನ : ವಿಧಾನಸಭಾ ಅಧ್ಯಕ್ಷ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ವೃಕ್ಷಥಾನ್ ಪಾರಂಪರಿಕ ಓಟ-2024 ಚಾಲನೆ

      ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನ : ವಿಧಾನಸಭಾ ಅಧ್ಯಕ್ಷ

      ವಿಜಯಪುರ,ಡಿ.22 : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿμÁ್ಠನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ವೃಕ್ಷಥಾನ್ ಪಾರಂಪರಿಕ ಓಟ-2024 ಭಾನುವಾರ ಯಶಸ್ವಿಯಾಗಿ ಜರುಗಿದ್ದು, 21 ಕಿ.ಮೀ, 10 ಕಿ.ಮೀ ಹಾಗೂ 5 ಕಿ.ಮೀ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಪಾರಂಪರಿಕ ಓಟ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ವಿಧಾನ ಸಭಾದ್ಯಕ್ಷರಾದ ಯು ಟಿ ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು 5 ಕಿ.ಮೀ. ಓಡಿ ಯುವಕರನ್ನು ಹುರಿದುಂಬಿಸಿದರು.

      ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ರವಿವಾರ ಹಮ್ಮಿಕೊಂಡ ವೃಕ್ಷಥಾನ ಪಾರಂಪರಿಕ ಓಟದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸಂತೋಷ ತಂದಿದೆ.ಭವಿಷ್ಯದಲ್ಲಿ ಪರಿಸರ ಹಾಗೂ ಭವ್ಯ ಸ್ಮಾರಕಗಳ ಸಂರಕ್ಷಣೆಯ ಆಶಯಗಳನ್ನೊಳಗೊಂಡ ಈ ಕಾರ್ಯಕ್ರಮದ ಉದ್ಧೇಶ ಸಾಪಲ್ಯತೆ ಕಾಣಲಿ. ನಮ್ಮ ಮುಂದಿನ ಪೀಳಿಗೆಗೆ ಸ್ವಚ್ಚ ಸುಂದರ ಪರಿಸರ ನಿರ್ಮಾಣ ಮಾಡುವ ಹೊಣೆ ನಮ್ಮದಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಪರಿಸರದ ಮಹತ್ವ ತಿಳಿಸಿಕೊಡುವುದು ಇಂದಿನ ಕಾಲಘಟ್ಟದ ಅಗತ್ಯವೂ ಆಗಿದೆ ಎಂದು ಹೇಳಿದರು.
      ಪರಿಸರ ಮಾಲಿನ್ಯ ಹವಾಮಾನ ಬದಲಾವಣೆ ಆರೋಗ್ಯಕ್ಕೆ ಸಂಬಂಧಿಸಿದ ಏರು-ಪೇರುಗಳಿಗೆ ಮುಖ್ಯ ಕಾರಣ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಮುಂದಾಗಬೇಕು. ನಮ್ಮ ಪೂರ್ವಜರು ಪರಿಸರ ಕಾಳಜಿಯಿಂದಾಗಿ ಇಂದು ನಾವು ಪ್ರಕೃತಿಯ ಸಂಪನ್ಮೂಲವನ್ನು ಪಡೆದಿದ್ದೇವೆ. ಪರಿಸರ ರಕ್ಷಣೆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಸಮೃದ್ಧ ಆರೋಗ್ಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರ ಕಾಳಜಿ ಹೊಂದಬೇಕು. ವೃಕ್ಷೋತ್ತಾನ ಅಭಿಯಾನದ ಸಂದೇಶ ಕೇವಲ ಜಿಲ್ಲೆಗೆ ಮಾತ್ರವಲ್ಲದೇ ದೇಶಕ್ಕೆ ದೊಡ್ಡ ಸಂದೇಶ ನೀಡುವುದಾಗಿದೆ ಎಂದು ಹೇಳಿದರು.

      ಮನುಷ್ಯ ಪರಿಸರದಿಂದ ವಿಮುಖನಾಗದೇ ಪ್ರಕೃತಿಯೊಂದಿಗೆ ಇದ್ದಾಗ ಎಲ್ಲ ಸಮಸ್ಯೆಗಳ ಪರಿಹಾರ ಕಾಣಬಹುದಾಗಿದೆ. ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಅಗತ್ಯವಾಗಿದೆ. ಪರಿಸರ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪರಿಸರ ಉಳಿಸಿ ಬೆಳೆಸಬೇಕು. ವೃಕ್ಷಥಾನ ಆಯೋಜನೆಯ ಸಂದೇಶ ಸಾಕಾರಗೊಳ್ಳಲಿ, ಓಟದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಅವರು ಹೇಳಿದರು.
      ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕÀÀಗಳ ರಕ್ಷಣೆ, ಗಿಡ-ಮರಗಳನ್ನು ಬೆಳೆಸಿ ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವ ಮೂಲಕ ವಿಜಯಪುರದ ಐತಿಹಾಸಿಕ ಗತವೈಭವನ್ನು ಮರಳಿ ಪಡೆಯಲು ಪ್ರತಿಯೊಬ್ಬರು ಕೈ ಜೋಡಿಸುವಂತೆ ಅವರು ಕರೆ ನೀಡಿದರು.
      ಜಿಲ್ಲೆಯಲ್ಲಿ ಹಲವಾರು ಐತಿಹಾಸಿಕ ಸ್ಮಾರಕಗಳಿವೆÉ. ವಿಶ್ವ ಪ್ರಸಿದ್ಧ ಗೋಲಗುಂಬಜ್, ಇಬ್ರಾಹಿಂರೋಜಾ,ಅಸರ ಮಹಲ್, ಕುಮಟಿಗಿ ಬೇಸಿಗೆ ಅರಮನೆ, ಉಪ್ಪಲಿ ಬುರಜ್ ಸೇರಿದಂತೆ ಹಲವು ಸ್ಮಾರಕಗಳನ್ನು ಜಿಲ್ಲೆ ಹೊಂದಿದೆ. ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ಅಭಿವೃದ್ಧಿಪಡಿಸಿ ಸ್ಮಾರಕಗಳ ಬಗ್ಗೆ ವ್ಯಾಪಕ ತಿಳುವಳಿಕೆ ಮೂಡಿಸಬೇಕು. ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಕ್ಷೇತ್ರ ಬೆಳವಣಿಗೆ, ವ್ಯಾಪಾರ ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

      ಈ ನಿಟ್ಟಿನಲ್ಲಿ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ಜಾಗೃತಿ ಮೂಡಿಸುವ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪರಿಸರ ರಕ್ಷಣೆ, ಪರಿಸರ ಪ್ರೇಮಿ ಹಾಗೂ ಪರಿಸರ ಕುರಿತು ಅಪಾರ ಕಾಳಜಿ ಹೊಂದಿದ್ದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಈ ಅಭಿಯಾನ ಅರ್ಪಣೆ ಮಾಡಲಾಗಿದೆ ಎಂದು ಹೇಳಿದರು. ವಿಶಾಲವಾದ ಭೂಪ್ರದೇಶ, ಹಸಿರು ಹಾಸಿಗೆ, ತಿಳಿನೀರಿನ ಹೊಳೆಯ ದಂಡೆ, ಸುರಿಯುವ ಮಳೆ, ಪರಿಶುದ್ಧ ಗಾಳಿ, ಅನಂತ ಆಗಸ ಇದೆಲ್ಲ ನಿಸರ್ಗ ನಿಧಿ! ನಿಜ ಸಂಪದ!! ಎಂಬ ಸಿದ್ದೇಶ್ವರ ಸ್ವಾಮಿಜಿಗಳ ನುಡಿಯಂತೆ ನಡೆಯೋಣ ಎಂದು ಹೇಳಿದರು.

      ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ವೃಕ್ಷ ಅಭಿಯಾನ ಆರಂಭಿಸುವ ಮೂಲಕ ಜಿಲ್ಲೆಯ ಅರಣ್ಯೀಕರಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ 1.5 ಕೋಟಿ ಗಿಡಗಳನ್ನು ನೆಟ್ಟು ಪೋಷಿಸಲಾಗಿದೆ. ಜಿಲ್ಲೆಯ ಅರಣ್ಯ ಪ್ರದೇಶ ವಿಸ್ತೀರ್ಣ ಶೇ.0.17 ರಿಂದ ಶೇ.2.5ಕ್ಕೆ ತಲುಪಲು ಸಾಧ್ಯವಾಗಿದೆ. ಜಿಲ್ಲೆಯ ಹಸರೀಕರಣ ಹಾಗೂ ಐತಿಹಾಸಿಕ ಸ್ಮಾರಕಗಳ ಮಹತ್ವ ವಿಶ್ವದಾದ್ಯಂತ ಸಾರುವ ಈ ವಿಶೇಷವಾದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ವೃಕ್ಷ ಅಭಿಯಾನ ಪ್ರತಿಷ್ಠಾನ ಸೇರಿದಂತೆ ಸಾರ್ವಜನಿಕರು ಸಂಘ-ಸಂಸ್ಥೆಗಳು ಕೈ ಜೋಡಿಸಿರುವುದರಿಂದ ಈ ಅಭೂತಪೂರ್ವ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹಾಗೂ ಮ್ಯಾರಾಥಾನ್‍ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಜಿಲ್ಲೆಯ ನೀರಾವರಿ ಯೋಜನೆಗಳಿಂದಾಗಿ ಅಂತರ್ಜಲಮಟ್ಟ ಹೆಚ್ಚಾಗಿದ್ದು ಇದರಿಂದ ರೈತರಿಗೆ ಅನುಕೂಲ ಒದಗಿಸಿದೆ.ಎಲ್ಲರ ಸಹಭಾಗಿತ್ವದಲ್ಲಿ ಸುಂದರ ಪರಿಸರವನ್ನು ಕಾಪಾಡಿಕೊಂಡು ನಮ್ಮ ಮುಂದಿನ ಪೀಳಿಗೆಗೆ ನೀಡುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ತುಂಬಗಿ-ತಿಡಗುಂದಿ ಗ್ರಾಮದ ಶ್ರೀಮತಿ ಶಾಂತಮ್ಮ ಹರನಾಳ, ಸಂಚಾರಿ ಪೆÇಲೀಸ್ ಠಾಣೆಯ ಎ.ಎಸ್.ಐ ಶಿವಾನಂದ ಕಟ್ಟಿಮನಿ, ಮ್ಯಾರಥಾನ ಓಟಗಾರ ನರೇನ್ ನಾಗಶೆಟ್ಟಿ ಹಾಗೂ ಪ್ರಾಚೀನ ಪರಂಪರೆಯ ಸಂರಕ್ಷಣೆರಾದ ಅಮೀನ ಹುಲ್ಲೂರ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಿಭಾಗದ ಓಟಗಳಲ್ಲಿ ಭಾÀಗವಹಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
      ಈ ಕಾರ್ಯಕ್ರಮದಲ್ಲಿ ಪರಿಷತ್ತಿನ ಶಾಸಕರಾದ ಸುನೀಲಗೌಡ ಪಾಟೀಲ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೆಎಸ್‍ಡಿಎಲ್ ಎಂ.ಡಿ. ಪ್ರಶಾಂತ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸೌಮ್ಯ ಬಾಪಟ್, ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕೆ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವೃಕ್ಷ ಅಭಿಯಾನ ಪ್ರತಿಷ್ಠಾನದ ಮಹಾಂತೇಶ ಬಿರಾದಾರ, ಸಂಚಾಲಕರಾದ ಮುರುಗೇಶ ಪಟ್ಟಣಶೆಟ್ಟಿ ಇತರರು ಉಪಸ್ಥಿತರಿದ್ದರು.

      ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ವೃಕ್ಷಥಾನ್ : ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಜಯಪುರ ನಗರದಲ್ಲಿ ಹಮ್ಮಿಕೊಂಡ ವೃಕ್ಷತ್ಥಾನ್ ಹೆರಿಟೇಜ್ ರನ್ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿಯಾಗಿ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು.

      ಈ ಓಟದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್, ಸಚಿವರಾದ ಡಾ.ಎಂ.ಬಿ.ಪಾಟೀಲ, ಪರಿಷತ್ತಿನ ಶಾಸಕರಾದ ಸುನೀಲಗೌಡ ಪಾಟೀಲ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಎಸ್.ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಅತಿ ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡು ಓಟಗಾರರಿಗೆ ಪ್ರೇರಣೆ ನೀಡಿ ಪ್ರೊತ್ಸಾಹಿಸಿದರು.

      ವಿವಿಧ ವಿಭಾಗದ ಓಟಗಳಿಗೆ ಚಾಲನೆ: ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಶಾಸಕರಾದ ಸುನೀಲಗೌಡ ಪಾಟೀಲ್, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮೇಯರ್ ಮಹೇಜಬಿನ್ ಹೋರ್ತಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಎಸ್.ಪಿ ಲಕ್ಷ್ಮಣ ನಿಂಬರಗಿ ಅವರು ವಿವಿಧ ವಿಭಾಗದ ಓಟಗಳಿಗೆ ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

      Tags: #indi / vijayapur#Public News#Today News#Voiceofjanata.in#ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನ : ವಿಧಾನಸಭಾ ಅಧ್ಯಕ್ಷvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.