ಇಂಡಿ: ಸ್ವಾತಂತ್ರ್ಯ ಹೋರಾಟಗಾರರ,ಶರಣರ ಭಾವ ಚಿತ್ರಗಳಿಗಳಿಗೆ ಅಪಮಾನ ಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾಲುಮತ ಹಾಗೂ ಪಂಚಮಸಾಲಿ ಸಮಾಜದ ಮುಖಂಡರು ಸಿ.ಎಂ.ಬಸವರಾಜ ಬೊಮ್ಮಾಯಿಯವರಿಗೆ ಬೆಳಗಾವಿಯಲ್ಲಿ ಒತ್ತಾಯಿಸಿದ್ದಾರೆ.
ಹೌದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮುಖಂಡರು ಬೆಳಗಾವಿಯಲ್ಲಿ ಕ್ರಾಂತೀವೀರ ಸಂಗೊಳ್ಳಿನ ಮೂರ್ತಿಯನ್ನು ವಿರೂಪಗೊಳಿಸಿರುವುದು ಮತ್ತು ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಗಿ ಗ್ರಾಮದಲ್ಲಿ ತಡರಾತ್ರಿ ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ ಮಾಡಿದ್ದನ್ನು ಖಂಡಿಸುತ್ತೇವೆ. ಕೂಡಲೇ ಈ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಿ ಉಗ್ರ ಶಿಕ್ಷೆಗೆ ಗುರಿ ಮಾಡಬೇಕೆಂದು ಹಾಲುಮತ ಹಾಗೂ ಪಂಚಮಸಾಲಿ ಸಮಾಜದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.