ವಿಜಯಪುರ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಹ್ಮದ ನಾಗಾವಿ ಹಾಗೂ ತುಕಾರಾಂ ಭಜಂತ್ರಿ ಬಂಧಿತ ಆರೋಪಿಗಳು. ಬಂಧಿತರಿಂದ 50 ಸಾವಿರ ಮೌಲ್ಯದ ಟಂಟಂ ಗೂಡ್ಸ್, 36,090 ಮೌಲ್ಯದ 1210 ಕೆಜಿ ಅಕ್ಕಿ ಹಾಗೂ ಸ್ಯಾಂಪಲ್‌ಗಾಗಿ ತೆಗೆದ 58 ರೂಪಾಯಿ ಮೌಲ್ಯದ 2 ಕೆಜಿ ಅಕ್ಕಿ ಸೇರಿದಂತೆ ಒಟ್ಟು 85,148 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಮುಂದಿನ ಕಾನೂನು ಕ್ರಮತೆಗೆದುಕೊಂಡಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಂದಗಿ | ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..!
ಹದಗೆಟ್ಟ ರಸ್ತೆಯಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮನ್ನಾಪುರ ಬಳಿ ನಡೆದಿದೆ. ಸಿಂದಗಿ ಹೊನ್ನಳ್ಳಿ ಬಸ್ ಪಲ್ಟಿಯಾಗಿದ್ದು, ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳು ಆಗಿದ್ದಾವೆ. ಸಿಂದಗಿ ತಾಲೂಕಾಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.