ವಿಜಯಪುರ: ಕೆಎಸ್ ಈಶ್ವರಪ್ಪ ಅವರನ್ನ ಯಾಕೆ ಬಂಧನ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದರು. ಈಶ್ವರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆಗೆ ನೀಡಿದ್ದಾರೆ. ಆದ್ರೆ ಬಂಧನ ಯಾಕೆ ಆಗಬೇಕು ಎಂದು ಪ್ರಶ್ನಿಸಿದರು. ಇನ್ನು ಧರ್ಮ ಧರ್ಮಗಳ ನಡುವೆ ಸಂಘರ್ಷ ಆದಾಗ, ಇದೇ ಕಾಂಗ್ರೆಸ್ ಮೌನಕ್ಕೆ ಶರಣಾಗಿದ್ದು ಯಾಕೆ? ಸರ್ವಜನಾಂಗದ ಶಾಂತಿಯ ತೋಟವನ್ನ ಹಾಳು ಮಾಡುವಾಗ ಎಲ್ಲಿ ಹೋಗಿದ್ರಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಅಲ್ಲದೇ, ಸಿದ್ದರಾಮಯ್ಯ ಕಾಲದಲ್ಲಿ ಬೆಳಗಾವಿ ಜಿಲ್ಲೆಯ ಕಲ್ಲಪ್ಪ ಹಂಡೀಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಸಿದ್ದರಾಮಯ್ಯ ರಾಜೀನಾಮೆ ಕೊಟ್ರಾ.?ಆಗಿನ ಗೃಹ ಸಚಿವರು ರಾಜೀನಾಮೆ ಕೊಟ್ರಾ ಹಂಡಿಬಾಗ್ ಸರ್ಕಾರದ ನಡವಳಿಕೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದರು.