ರಾಯಚೂರು: ಜಿಲ್ಲೆಯ ಹಲವಾರು ಅಭಿವೃದ್ಧಿ ಕಾಮಗಾರಿ ಕುಂಟಿತಗೊಂಡಿದ್ದು, ಕೂಡಲೇ ಕುಂಟಿತಗೊಂಡ ಕಾಮಗಾರಿಗಳನ್ನು ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಗೆ ಅನುದಾನ ಬಂದು ೧೦ ವರ್ಷ ಗತಿಸಿದರೂ, ಕಾಮ ಗಿರಿ ಪೂರ್ಣಗೊಂಡಿಲ್ಲ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಪ್ರಾರಂಭವಾಗಿ ಆರು ವರ್ಷಗಳಾದರೂ, ಇದುವರೆಗೂ ಕಾಮಗಾರಿ ಪೂರ್ಣಗೊಳಿಸದೇ ನೆನೆಗುದಿಗೆ ಬಿದ್ದಿದೆ.
ರಾಯಚೂರು ವಿಮಾನ ನಿಲ್ದಾಣ ಕಾರ್ಯ ಯಾವ ಮಟ್ಟಕ್ಕೆ ತಲುಪುತ್ತಿದೆ ಎಂಬುವುದು ಜಿಲ್ಲೆಯ ಜನರಿಗೆ ತಿಳಿಯುತ್ತಿಲ್ಲ. ನೂತನ ರಾಯಚೂರು ಕೃಷಿ ವಿಶ್ವವಿದ್ಯಾಲಯಕ್ಕೆ ಅನುದಾನ, ಉಪನ್ಯಾಸ ಕೊರತೆ ಕೂಡಲೇ ನಿವಾರಿಸುವ ಕೆಲಸ ಮಾಡಬೇಕು.
ಮಳೆಯಿಂದ ರೈತರ ಬೆಳೆ ನಷ್ಟವಾಗಿದ್ದು, ಕೂಡಲೇ ಬೆಳೆ ನಷ್ಟ ಪರಿಹಾರ ರೈತರಿಗೆ ತಲುಪಿಸುವಂತಹ ಕೆಲಸ ಮಾಡಬೇಕೆಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕೂಡಲೇ ಪರಿಹರಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕಕುಮಾರ ಜೈನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.