133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು..! ಎಲ್ಲಿ ಗೊತ್ತಾ..?
ವಿಜಯಪುರ : ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೂಡಗಿ ಎನ್ಟಿಪಿಸಿ ಘಟಕದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಕಿಶನಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ. ಎನ್ ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಎನ್ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.