ಇಂಡಿ : ಬೈಕ್ ಹಾಗೂ ಲಾರಿ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಸ್ ನಿಲ್ದಾಣದ ಎದುರು ನಡೆದಿದೆ. ಅಂಬರೀಶ್ ಗಣೇಶ ಮೋರೆ ಮೃತಪಟ್ಟಿರುವ ದುರ್ದೈವಿ. ಇನ್ನು ಯುವಕ ಅಂಬರೀಶ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಇದ್ದಿಲು ತುಂಬಿಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಲಾರಿ ಡಿಕ್ಕಿಯಾಗಿದೆ. ಇದರಿಂದ ಅಂಬರೀಶ್ ಅಸುನೀಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.