Voice Of Janata Political News :
ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಹೌದು ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಕರ್ನಾಟಕದಲ್ಲಿ ಮೊದಲ ಹಂತ ಹಾಗೂ ಎರಡನೇ ಹಂತ ಎಲ್ಲಿ ಎಲ್ಲಿ ನಡೆಯುತ್ತದೆ ಎಂಬ ಬಗ್ಗೆ ಮುಂದಿನ ವರದಿಯಲ್ಲಿ ಮಾಹಿತಿ ನೀಡಲಾಗುತ್ತದೆ.
ಚುನಾವಣೆ ಬಗ್ಗೆ ಕ್ಷಣ ಕ್ಷಣಕ್ಕೂ ಮಾಹಿತಿ ಮತ್ತು ಬೆಳವಣಿಗಾಗಿ ವೈಸ್ ಆಫ ಜನತಾ ವಿಕ್ಷಿಸಿ