ಲೋಕಸಭಾ ಸಾರ್ವತ್ರಿಕ ಚುನಾವಣೆ – 2024
ಜೂನ್ 6 ರವರಿಗೆ ಕಲಂ 144 ವಿಸ್ತರಣೆ
ವಿಜಯಪುರ ಜೂನ್ 3 : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಮತ ಎಣಿಕೆಯು ಜೂನ್ 4 ರಂದು ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು,
ಮತ ಎಣಿಕೆ ಕಾರ್ಯವನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯುವಂತೆ ಅನೂಕೂಲವಾಗಲು ಹಾಗೂ ಯಾವುದೇ ಅಹಿತಕರ ಘಟನೆಗಳು ಜರಗದಂತೆ , ಸಾರ್ವಜನಿಕ ವಿತ್ತಿ – ಜೀವಿತಗಳನ್ನು ಸಂರಕ್ಷಣೆ ಮಾಡುವ ಹಿತದೃಷ್ಟಿಯಿಂದ ಜೂನ್ 4ರ ಬೆಳಗ್ಗೆ 6 ಗಂಟೆಯಿಂದ ಜೂನ್ 6 ರ ಮಧ್ಯರಾತ್ರಿ 12 ಗಂಟೆಯವರೆಗೆ ಸಿ ಆರ್ ಪಿ ಸಿ ಸೆ.144 ಅನ್ವಯ ಮತ ಎಣಿಕೆಯ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.