ಪ್ರಜಾಪ್ರಭುತ್ವದ ರಕ್ಷಣೆಗಾಗಿ ಮತದಾನ ಮಾಡಿ
ಇಂಡಿ : ದೇಶ ಹಾಗೂ ಸಂವಿಧಾನದ ರಕ್ಷಣೆಗಾಗಿ
ಕಡ್ಡಾಯವಾಗಿ ನೈತಿಕ ಮತದಾನ ಮಾಡಬೇಕು
ಎಂದು ಸಹಾಯಕ ಚುನಾವಣೆ ಅಧಿಕಾರಿ ಮತ್ತು
ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ
ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಡಾ|| ಬಾಬಾಸಾಹೇಬ
ಅಂಬೇಡಕರ ಜನ್ಮ ದಿನಾಚರಣೆ ನಿಮಿತ್ಯ ಪುರಸಭೆ
ಕಾರ್ಮಿಕರಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಬಾರಿ ಶೇ 100 ರಷ್ಟು ಮತದಾನದ ಗುರಿ ಹೊಂದಿದ್ದು ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಈ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಮತದಾರರು ಸಹಕರಿಸಬೇಕು. ಆ ಮೂಲಕ ದೇಶದ ಅಭಿವೃದ್ದಿಗೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದರು.
ತಾವು ಸ್ವತಃ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ|| ಬಾಬಾ ಸಾಹೇಬ ಅಂಬೇಡಕರ ಜಯಂತಿ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಾ.ಪಂ ಯೋಜನಾಧಿಕಾರಿ ನಂದೀಪ ರಾಠೋಡ, ತಹಸೀಲ್ದಾರ ಮಂಜುಳಾ ನಾಯಕ,ಐ.ಇ.ಸಿ ಸಂಯೋಜಕ ರಾಮಗೌಡ ಸರಬಡಗಿ ಮತ್ತಿತರಿದ್ದರು.
ಇಂಡಿ ಪಟ್ಟಣದ ಮಿನಿ ವಿಧಾನಸೌಧ ಸ್ವಚ್ಛತಾ ಕಾರ್ಯಕ್ರಮ ಮತ್ತು ಮತದಾನ ಜಾಗೃತಿ
ಕಾರ್ಯಕ್ರಮದಲ್ಲಿ ಎಸಿ ಅಬೀದ ಗದ್ಯಾಳ
ಮಾತನಾಡಿದರು.