ಲೋಕಸಭಾ ಸಾರ್ವತ್ರಿಕ ಚುನಾವಣೆ 2024 :
5 ಮೇ ಯಿಂದ 7 ರವರೆಗೆ ಕಲಂ144 ಜಾರಿ
ವಿಜಯಪುರ ಏ.17 : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಮತದಾನವು ಮೆ.7ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲಾ 2085 ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಸಲುವಾಗಿ ಮೇ 5 ರಿಂದ .7 ವರೆಗೆ ಮತದಾನ ಮುಕ್ತಾಯವಾಗುವರೆಗೂ ಜಿಲ್ಲೆಯಲ್ಲಿ ಸೆಕ್ಷನ್ 144 ರ ಪ್ರತಿಭಂದಕಾಜ್ಞೆ ಜಾರಿ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಮೇ 5 ರಿಂದ ಮೇ 7 ರಂದು ಮತದಾನ ಮುಗಿಯವವರೆಗೂ 5 ಕ್ಕಿಂತ ಹೆಚ್ಚು ಜನರು ಗುಂಪು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರಗಿಸುವುದು ನಿಷೇಧಿಸಿದೆ. ಅದಲ್ಲದೇ, ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಸಂಚರಿಸುವುದು, ಮತಗಟ್ಟೆಗಳ 100 ಮೀಟರ್ ಸುತ್ತಮುತ್ತ ರಾಜಕೀಯ ಪಕ್ಷಗಳ ಪೋಸ್ಟರ್, ಬ್ಯಾನರ್ ಹಾಗೂ ಪ್ರಚಾರ , . ಸಾರ್ವಜನಿಕವಾಗಿ ಪ್ರಚೋಧನಕಾರಿ ಹೇಳಿಕೆ, ವ್ಯಕ್ತಿಗಳ ತೇಜೋವಧೆ ಮಾಡುವುದು, ಮತಗಟ್ಟೆಯ ಸುತ್ತಮುತ್ತ ಧ್ವನಿವರ್ಧಕಗಳನ್ನು ಬಳಸುವುದಕ್ಕೆ ನಿರ್ಬಂದವಿರುತ್ತದೆ ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ