ಇಂಡಿ : ಭವ್ಯ ಭಾರತದ ನಿರ್ಮಾಣಕ್ಕೆ, ರಾಷ್ಟ್ರದ ಅಭಿವೃದ್ಧಿಗೆ ಪ್ರಜಾಪ್ರಭುತ್ವದ ಅತ್ಯಂತ
ಮಹತ್ವವಾದ 2024 ರ ಲೋಕಸಭಾ ಚುನಾವಣೆಯ ನಿಮಿತ್ತ ಇಂಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಬೆಳಿಗ್ಗೆ ಮತದಾನದ ಮಾಡಿದರು.
ತಾಲ್ಲೂಕಿನ ಪಡನೂರ ಗ್ರಾಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ತದನಂತರ ಮಾತನಾಡಿದ ಅವರು ಮತದಾನ ಪ್ರಜಾಪ್ರಭುತ್ವದ ಪರಮೋಚ್ಛ ಅಧಿಕಾರ, ಪ್ರತಿಯೊಬ್ಬರು ಆದಷ್ಟು ಬೇಗನೆ ಮತ ಚಲಾವಣೆ ಮಾಡಿ ನಿಮ್ಮ ಹಕ್ಕನ್ನು ಚಲಾಯಿಸಲು ವಿನಂತಿಸಿದರು.