Voice Of Janata: EDITOR :
ಹಂತ 1: 19 ಏಪ್ರಿಲ್,21 ರಾಜ್ಯಗಳು
ಹಂತ 2: 26 ಏಪ್ರಿಲ್ ,13 ರಾಜ್ಯಗಳು,
ಹಂತ 3: 7 ಮೇ, 12 ರಾಜ್ಯಗಳು
ಹಂತ 4: 13 ಮೇ 10 ರಾಜ್ಯಗಳು
ಹಂತ 5: 20 ಮೇ 8 ರಾಜ್ಯಗಳು
ಹಂತ 6: 25 ಮೇ 7 ರಾಜ್ಯಗಳು
ಹಂತ 7: 1 ಜೂನ್ 8 ರಾಜ್ಯಗಳು.
ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ದೇಶಾದ್ಯಂತ 7 ಹಂತಗಳಲ್ಲಿ ಸಂಸತ್‌ನ ಕೆಳಮನೆಗೆ ಚುನಾವಣೆ ನಡೆಯಲಿದೆ. ಅದರಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 04ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಫಲಿತಾಂಶ ಜೂನ್ 04 ರಂದು ಬರಲಿದೆ.
ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುವ ಜಿಲ್ಲೆಗಳು ,ಮತಕ್ಷೇತ್ರಗಳು
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.