ಗುಮ್ಮಟ ನಗರಿಯಲ್ಲಿ ಲೋಕಾಯುಕ್ತ ದಾಳಿ..!
ವಿಜಯಪುರ: ಆರ್ ಟಿ ಓ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿಗೈದಿರುವ ಘಟನೆ ವಿಜಯಪುರದ ಚಾಲುಕ್ಯ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ಟಿ ಮಲ್ಲೇಶ ನೇತೃತ್ವದಲ್ಲಿ ದಾಳಿಗೈದು ಆರ್ ಟಿ ಓ ಅಧಿಕಾರಿ ಷಣ್ಮುಖಪ್ಪ ನಿವಾಸ ಸೇರಿದಂತೆ ವಿಜಯಪುರ ನಗರದಲ್ಲಿರು ಸಂಬಂಧಿಕರ ನಿವಾಸಗಳ ಮೇಲೂ ದಾಳಿ ನಡೆದಿದೆ. ದಾಖಲಾತಿಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿಎಸ್ಪಿ ಸುರೇಶ ರೆಡ್ಡಿ, ಇನ್ಸಪೆಕ್ಟರ್ ಆನಂದ ಠಕ್ಕನ್ನವರ ಹಾಗೂ ಇತರ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ.