ಯೋಜನಾಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ..!
ವಿಜಯಪುರ : ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ವಿಜಯಪುರದಲ್ಲೂ ಭ್ರಷ್ಟ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಯೋಜನಾಧಿಕಾರಿ ಬಲವಂತ ರಾಠೋಡ ನಿವಾಸದ ಮೇಲೆ ದಾಳಿ ನಡೆದಿದೆ.
ಯಾದಗಿರಿ-ವಿಜಯಪುರ ಸೇರಿ ನಿವಾಸ, ಕಚೇರಿ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.
ನಗರದ ಡಿಸಿಸಿ ಬ್ಯಾಂಕ್ ಹಿಂಬದಿಯ ಕೆ.ಸಿ ರಸ್ತೆಯಲ್ಲಿರುವ ಬಲವಂತ ನಿವಾಸದಲ್ಲಿ ದಾಖಲಾತಿ ಪರಿಶೀಲನೆ ಮುಂದುವರಿದಿದೆ.



















