ಲೋಕಾಯುಕ್ತ ಬಲೆಗೆ ಎఇఇ
Voice of Janata DesK News
ಬಳ್ಳಾರಿ: ಇಲ್ಲಿನ ಸಣ್ಣ ನೀರಾವರಿ ಇಲಾಖೆಯ ಎಇಇ ನಾಗರಾಜ ಅವರು 2ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯೊಂದರ ಬಿಲ್ ಪಾವತಿಸಲು ಗುತ್ತಿಗೆದಾರರಿಂದ ಮೂರು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ ಎರಡು ಲಕ್ಷ ಹಣ ಸ್ವೀಕರಿಸುವ ಸಂದರ್ಭದಲ್ಲಿ ಸಣ್ಣ ನೀರಾವರಿ ಎಇಇ ನಾಗರಾಜ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದರು. ಮೂರು ಲಕ್ಷ ಬೇಡಿಕೆ ಇಟ್ಟಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ಗುತ್ತಿಗೆದಾರ ರಾಮಕೃಷ್ಣ ಬಳಿಕ ಗುತ್ತಿಗೆದಾರರಿಂದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದರು. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಸಿಪಿಐ ಸಂಗಮೇಶ ಹಾಗೂ ಸಿಬ್ಬಂದಿ ದಾಳಿ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.