ವಿವಿಧ ತಾಲೂಕುಗಳಿಗೆ ನಾಳೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಚಾಮರಾಜನಗರ: ಹನೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ವಿಳಂಬ ಮಾಡುವುದು ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬಂಧಪಟ್ಟ ಸಾರ್ವಜನಿಕ, ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಕರ್ನಾಟಕ ಲೋಕಯುಕ್ತ ಕಾಯ್ದೆ 1984ರ ಅಡಿಯಲ್ಲಿ ಕ್ರಮಬದ್ಧವಾಗಿ ಭರ್ತಿ ಮಾಡಿದ ದೂರುಗಳನ್ನು ನಮೂನೆ 01 ರಲ್ಲಿ ಮತ್ತು 02 ರಲ್ಲಿ ಪ್ರಮಾಣ ಪತ್ರಗಳನ್ನು ಅಗತ್ಯ ದಾಖಲಾತಿಗಳೊಡನೆ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ನವೆಂಬರ್ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲೂಕುವಾರು ಬೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸರಗೂರು ತಾಲೂಕಿನ ಪಿಡಬ್ಲ್ಯೂಡಿ ಗೆಸ್ಟ್ ಹೌಸ್ ಮತ್ತು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪ್ರವಾಸಿ ಮಂದಿರ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಾಲೂಕು ಕಚೇರಿ ಸಭಾಂಗಣದಲ್ಲಿ ದೂರು ಸಿಂಕಾರ ಕಾರ್ಯಕ್ರಮವು ನಡೆಯುತ್ತದೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅದಿಕ್ಷಕ ಎಸ್ ಸುರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಬಂಧ ಪಟ್ಟ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಾವುದೇ ಅಕ್ರಮ ಭ್ರಷ್ಟಾಚಾರ ಎಸಗುತ್ತಿರುವ ಅಧಿಕಾರಿಗಳ ವಿರುದ್ಧ ತಮ್ಮ ದೂರನ್ನು ಸಲ್ಲಿಸಬಹುದು.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..