ತಿಕೋಟ: ಲಾರಿ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಬಾಬಾನಗರ ಬಳಿ ನಡೆದಿದೆ. ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಐವರು ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ. ರಸ್ತೆ ಮೇಲೆ ಅರ್ಧ ಗಂಟೆಯಿಂದ ಡ್ರೈವರ್ ನರಳಾಟ ಅನುಭವಿಸುತ್ತಿದ್ದು, ಸ್ಥಳಕ್ಕೆ ಬಾರದ 108 ಅಂಬುಲೇನ್ಸ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಕೋಟಾ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



















