ವಿಜಯಪುರ : ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಬುಧವಾರ ನಡೆದಿದೆ. ರಾಕೇಶ್ ಅಂಗಡಿ (23) ಹಾಗೂ ಸಾವಿತ್ರಿ ಅಂಬಲಿ (19) ಮೃತಪಟ್ಟಿರುವ ಪ್ರೇಮಿಗಳು. ಜೈನಾಪೂರ ಗ್ರಾಮದ ಹೊರವಲಯದ ತೊಟವೊಂದರಲ್ಲಿ ಗಿಡಕ್ಕೆ ನೇಣು ಹಾಕಿಕೊಂಡಿದ್ದಾರೆ. ರಾಕೇಶ್ ಮತ್ತು ಸಾವಿತ್ರಿ ಮನೆಯಿಂದ ಹೊರ ಹೋಗಿದ್ದರು ಎಂದು ತಿಳಿದು ಬಂದಿದೆ. ಇಬ್ಬರೂ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಸವನಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.