ಮಹರ್ಷಿ ವಾಲ್ಮೀಕಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು : ಶಾಸಕ ಎಂ ಆರ್ ಮಂಜುನಾಥ್
ಹನೂರು: ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಮ್ಮ ನಾಡಿನನಲ್ಲಿ ಅನೇಕ ಮಹನೀಯರು ಜನ್ಮತಾಳಿದ್ದಾರೆ ಇಂತಹ ಪುಣ್ಯಸ್ಥಳದಲ್ಲಿ ಹುಟ್ಟಿರುವುದೆ ನಮ್ಮ ಪುಣ್ಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಹಾಗೂ ವಾಲ್ಮೀಕಿ ಮಹರ್ಷಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಮಾತನಾಡಿ ವಾಲ್ಮೀಕಿ ಮಹರ್ಷಿ ಬರೆದ ರಾಮಾಯಣ ದೇಶ- ವಿದೇಶಗಳಲ್ಲಿ ವಿಶ್ವ ವಿಖ್ಯಾತಿ ಆಗಿದೆ. ವಾಲ್ಮೀಕಿ ಮಹರ್ಷಿಗಳು ಪ್ರಚೇತಸ ಮುನಿಯ ಮಗ ಹೀಗಾಗಿ ಅವರಿಗೆ ಪ್ರಚೇತಸ ಎಂಬ ಹೆಸರಿದೆ. ಪರಮಾತ್ಮನನ್ನು ಕುರಿತು ಬಹಳ ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದಾಗ ಅವರ ಸುತ್ತ ಹುತ್ತ ಬೆಳೆದಿತ್ತು. ಹುತ್ತ (ಸಂಸ್ಕೃತದಲ್ಲಿ ವಲ್ಮೀಕ) ವನ್ನು ಭೇದಿಸಿಕೊಟ್ಟು ಹೊರಗೆ ಬಂದಿದ್ದರಿಂದ ವಾಲ್ಮೀಕಿ ಎಂಬ ಹೆಸರು ಬಂದಿದೆ. ಪ್ರಸ್ತುತ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿಶೇಷತೆಯಿಂದ ಕೂಡಿದ್ದು, ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಿಕೊಂಡಲ್ಲಿ ಅವರ ಜೀವನ ಉತ್ತಮವಾಗಿರುತ್ತದೆ.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ವೈಕೆ ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಮೂರ್ತಿ, ಸಿಡಿಪಿಒ ನಂಜಮಣಿ, ತಾಲೂಕು ಪಂಚಾಯಿತಿ ಇಒ ಉಮೇಶ್, ಪಶುವೈದ್ಯಾಧಿಕಾರಿ ಡಾ ಸಿದ್ದರಾಜು ಎಇಇ ಶಂಕರ್ ಎ ಎಸ್ ಐ ಶಿವಕುಮಾರ್ ಪಟ್ಟಣ ಪಂಚಾಯ್ತಿಯ ಸದಸ್ಯರಾದ ಮಹೇಶ್ ಹಾಗೂ ಸಮುದಾಯದ ಮುಖಂಡರುಗಳು ಹಾಜರಿದ್ದರು.