• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

    ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

    ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

    ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

    ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

    ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

    ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು -ಶಶಿಧರ ಕೋಸಂಭೆ

    ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು -ಶಶಿಧರ ಕೋಸಂಭೆ

    ವಿವೇಕಾನಂದರ ನವಭಾರತ ನಿರ್ಮಾಣದ ಚಿಂತನೆಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಿ-ಸಂತೋಷ ಬಂಡೆ

    ವಿವೇಕಾನಂದರ ನವಭಾರತ ನಿರ್ಮಾಣದ ಚಿಂತನೆಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಿ-ಸಂತೋಷ ಬಂಡೆ

    ಸ್ವಾಮಿ ವಿವೇಕಾನಂದ ಜಯಂತಿ; ಪುತ್ಥಳಿಗೆ ಮಾಲಾರ್ಪಣೆ ಮೂಲಕ ಶಾಸಕ ಯತ್ನಾಳರಿಂದ ಗೌರವ ನಮನ

    ಸ್ವಾಮಿ ವಿವೇಕಾನಂದ ಜಯಂತಿ; ಪುತ್ಥಳಿಗೆ ಮಾಲಾರ್ಪಣೆ ಮೂಲಕ ಶಾಸಕ ಯತ್ನಾಳರಿಂದ ಗೌರವ ನಮನ

    ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ : ಮಾಲಾಧಾರಿ ಅಭಿಯಾನದ ಪೂರ್ವಭಾವಿ ಸಭೆ

    ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ : ಮಾಲಾಧಾರಿ ಅಭಿಯಾನದ ಪೂರ್ವಭಾವಿ ಸಭೆ

    ರಾಜ್ಯ ಸರಕಾರದಿಂದ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ : ಸಂಸದ ರಮೇಶ್

    ರಾಜ್ಯ ಸರಕಾರದಿಂದ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ : ಸಂಸದ ರಮೇಶ್

    ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಮಕ್ಕಳ ಸಂತೆ ಸಹಕಾರಿ; ಚಿದಾನಂದ ಅವಟಿ

    ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಮಕ್ಕಳ ಸಂತೆ ಸಹಕಾರಿ; ಚಿದಾನಂದ ಅವಟಿ

    ಕ್ಯಾಲೆಂಡರ್ ಬಿಡುಗಡೆ ಇಂಡಿ

    ಕ್ಯಾಲೆಂಡರ್ ಬಿಡುಗಡೆ ಇಂಡಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

      By fayazahamad

      January 12, 2026
      0
      ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ :ವಿ.ಪ ಶಾಸಕ ಪಾಟೀಲ

      ವಿಜಯಪುರ: ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಇಂದು ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.

      ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ ಆರೋಗ್ಯ ಹೊಂದುವುದು ಮಹತ್ವದ್ದಾಗಿದೆ. ನಾವು ಬದುಕಿರುವವರೆಗೂ ಯಾವುದೇ ಆರೋಗ್ಯ ಸಮಸ್ಯೆಗೆ ಒಳಗಾಗದೆ, ಪರಾವಲಂಬಿ ಜೀವನ ಸಾಗಿಸದೇ ಸ್ವಾವಲಂಬಿಯಾಗಿ ಬದುಕುವುದು ಅಗತ್ಯವಾಗಿದೆ. ಹೀಗಾಗಿ ಉತ್ತಮ ಆರೋಗ್ಯವನ್ನು ಇಂದು ಹೆಚ್ಚುವರಿ ಸಂಪತ್ತು ಪರಿಗಣಿಸಲಾಗಿದೆ. ಬಿ.ಎಲ್.ಡಿ.ಇ ನಗರ ಆರೋಗ್ಯ ಕೇಂದ್ರದಲ್ಲಿ ಒಂದೇ ಸೂರಿನಡಿ ಆಯುರ್ವೇದ ಮತ್ತು ಅಲೋಪಥಿ ಚಿಕಿತ್ಸೆ ಸೌಲಭ್ಯ ಒದಗಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೊಸ ಆುಯರ್ವೇದ ಕಾಲೇಜು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೇ, ಅಲ್ಲಿಯೂ ನಗರ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

      ಪತ್ರಕರ್ತರ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದ್ದು, ನಮ್ಮ ತಂದೆಯವರ ಕಾಲದಿಂದಲೂ ಉತ್ತಮ ಬಾಂಧವ್ಯವಿದೆ. ಮಾಧ್ಯಮ ಪ್ರತಿನಿಧಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ಅನಾರೋಗ್ಯ ಸಮಸ್ಯೆಯಾದಾಗ ಈ ಹೆಲ್ತ್ ಕಾರ್ಡ್ ಉಪಯೋಗವಾಗಲಿದೆ ಎಂದು ಶಾಸಕರು ಹೇಳಿದರು.

      ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಳೆದ 75 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ತಾಯಿ ಮತ್ತು ಶಿಶು ಮರಣ ಸಂಖ್ಯೆ ಕಡಿಮೆಯಾಗಿದೆ. ಉತ್ತಮ ಆರೋಗ್ಯ ಸೇವೆಗಳಿಂದಾಗಿ ರೋಗಿಗಳಿಗೆ ಅನುಕೂಲವಾಗಿದೆ. ವೈದ್ಯರು ತಮ್ಮ ವೃತ್ತಿಸಂಹಿತೆಯನ್ನು ಪಾಲಿಸುತ್ತ ಗುಣಮಟ್ದ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಸಕಲ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿವೆ ಎಂದು ಹೇಳಿದರು.

      ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿ, ನಾನಾ ಕಾಯಿಲೆಗಳಿಂದ ಬಳಲುವವರಿಗೆ ಇಂದು ಅಂಗಾಂಗ ದಾನದ ಮೂಲಕ ಮರುಜೀವ ನೀಡಬಹುದಾಗಿದೆ. ಮೃತ ವ್ಯಕ್ತಿಯ ಒಂದು ನೇತ್ರದಾನ ಮಾಡುವುದರಿಂದ ನಾಲ್ಕು ಜನರ ಬಾಳಿಗೆ ಬೆಳಕು ನೀಡಬಹುದಾಗಿದೆ. ಹೀಗಾಗಿ ಎಲ್ಲರೂ ಅಂಗಾಂಗ ಮತ್ತು ದೇಹದಾನದ ಬಗ್ಗೆ ಜಾಗೃತರಾಗಬೇಕಿದೆ. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸಂಭವನೀಯ ಅನಾರೋಗ್ಯ ಸಮಸ್ಯೆಗಳಿಗೆ ಕಡಿವಾಣ ಹಾಕಬಹುದಾಗಿದೆ ಎಂದು ಹೇಳಿದರು.

      ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಮಾತನಾಡಿ, ಆಸ್ಪತ್ರೆಯಲ್ಲಿ ನೀಡಲಾಗುವ ಚಿಕಿತ್ಸೆ ಮತ್ತು ಸೌಲಭ್ಯಗಳು, ನಾನಾ ಆರೋಗ್ಯ ವಿಮೆಗಳು ಹಾಗೂ ವಿರಳ ಶಸ್ತ್ರಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದರು. ಅಲ್ಲದೇ, ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ವ್ಯವಸ್ಥೆ ಮಾಡಲಾಗಿದೆ. ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮಾಡಲಾಗುತ್ತಿದೆ. ಹೀಗಾಗಿ ಬಿ.ಎಲ್.ಡಿ.ಇ ಆಸ್ಪತ್ರೆಗೆ ಹೆಚ್ಚೆಚ್ಚು ರೋಗಿಗಳು ಚಕಿತ್ಸೆಗೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

      ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಅಂಗಡಿ ಮಾತನಾಡಿ, ಸಂಘದ ಸದಸ್ಯರಿಗೆ ಹೆಲ್ತ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದ್ದ ಶಾಸಕ ಸುನೀಲಗೌಡ ಪಾಟೀಲ ಅವರು ಕೆಲವೇ ದಿನಗಳಲ್ಲಿ ಅದನ್ನು ಈಡೇರಿಸುವ ಮೂಲಕ ಪತ್ರಕರ್ತರಿಗೆ ನೆರವಾಗಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

      ಈ ಸಂದರ್ಭದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರನ್ನು ಬಾಗಲಕೋಟೆ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

      ಈ ವೇಳೆ ಕಾಲೇಜಿನ ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂತೂರ, ಡಾ. ಉಪ ಅಧೀಕ್ಷಕ ಡಾ. ರವಿ ಬಿರಾದಾರ, ಟ್ರಾಮಾ ಸೆಂಟರ್ ಆಡಳಿತಾಧಿಕಾರಿ ಡಾ. ಶರಣಪ್ಪ ಕಟ್ಟಿ, ಆಸ್ಪತ್ರೆಯ ಸ್ಥಳೀಯ ವೈದ್ಯಾಧಿಕಾರಿ ಡಾ. ಅಶೋಕ ತರಡಿ, ಟ್ರಾಮಾ ಸೆಂಟರ್ ತುರ್ತು ಚಿಕಿತ್ಸೆ ಘಟಕದ ಮುಖ್ಯ ವೈದ್ಯಾಧಿಕಾರಿ ಡಾ. ಈರಣ್ಣ ಎಸ್. ಧಾರವಾಡಕರ, ಆಸ್ಪತ್ರೆ ಆಡಳಿತಾಧಿಕಾರಿ ಏಕನಾಥ ಜಾಧವ, ಬಿ.ಎಲ್.ಡಿ.ಇ ಸಂಸ್ಥೆಯ ಮಾಧ್ಯಮ ಸಮನ್ವಯಕಾರ ಮಹೇಶ ವಿ. ಶಟಗಾರ, ಬಾಗಲಕೋಟೆ ಜಿಲ್ಲೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳ ಪದಾಧಿಕಾರಿಗಳು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

      ಇದೇ ವೇಳೆ, ಕಾರ್ಯಕ್ರಮದ ಬಳಿಕ ಸುಮಾರು100ಕ್ಕೂ ಹೆಚ್ಚು ಜನ ಬಾಗಲಕೋಟೆ ಜಿಲ್ಲೆಯ ಪತ್ರಕರ್ತರು ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜು, ಆಸ್ಪತ್ರಮತ್ತು ಸಂಶೋಧನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಉಪಪ್ರಾಚಾರ್ಯ ಡಾ. ಶಶಿಧರ ನಾಯಿಕ ಪತ್ರಕರ್ತರಿಗೆ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿರುವ ಸೌಲಭ್ಯಗ ಕುರಿತು ಮಾಹಿತಿ ನೀಡಿ, ವಿದೇಶಗಳಿಂದ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ವತಿಯಿಂದಲೇ ಹಲವಾರು ಆಯುರ್ವೇದ ಔಷಧಿಗಳನ್ನು ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

      ಇದಾದ ಬಳಿಕ ಬ.ಎಲ್.ಡಿ.ಇ ಆಸ್ಪತ್ರೆಗೆ ಭೇಟಿ ನೀಡಿದ ಪತ್ರಕರ್ತರು ಅಲ್ಲಿ ಲಭ್ಯವಿವರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

      *1a and 1b MLC SBP Health Card to BGK Press*: ವಿಜಯಪುರ ನಗರದ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಕಾನಿಪ ಜಿಲ್ಲಾಧ್ಯಕ್ಷ ಮಹೇಶ ಅಂಗಡಿ, ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಮುಂತಾದವರು ಉಪಸ್ಥಿತರಿದ್ದರು.

      *2 MLC SBP Health Card to BGK Press*: ವಿಜಯಪುರ ನಗರದ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಕಾನಿಪ ಜಿಲ್ಲಾಧ್ಯಕ್ಷ ಮಹೇಶ ಅಂಗಡಿ, ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಮುಂತಾದವರು ಉಪಸ್ಥಿತರಿದ್ದರು.

      *3 MLC SBP Health Card to BGK Press*: ವಿಜಯಪುರ ನಗರದ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆ ವತಿಯಿಂದ ಬಾಗಲಕೋಟೆ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಹೇಶ ವಿ. ಶಟಗಾರ, ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಮುಂತಾದವರು ಉಪಸ್ಥಿತರಿದ್ದರು.​

      Tags: #indi / vijayapur#Maintaining good health in today's stressful life is like gaining additional wealth: VP MLA Patil#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      ಎಂತಹುದ್ದೇ ಕಠಿಣ ಸಂದರ್ಭದಲ್ಲೂ ನಾವು ಯಶಸ್ಸನ್ನು ಪಡೆಯಲು ಸಾಧ್ಯ..!

      January 12, 2026
      ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

      ಅಗರಖೇಡ ಗ್ರಾಮದಲ್ಲಿ ನೀರಿನ ತೊಂದರೆ

      January 12, 2026
      ವಿವೇಕಾನಂದ ಆದರ್ಶಗಳು ಯುವಜನಾಂಗಕ್ಕೆ ಎಂದು ಅನುಪಾಲನ‌ ಸೂತ್ರಗಳು

      ವಿವೇಕಾನಂದ ಆದರ್ಶಗಳು ಯುವಜನಾಂಗಕ್ಕೆ ಎಂದು ಅನುಪಾಲನ‌ ಸೂತ್ರಗಳು

      January 12, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.