ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬಹುಮತ ಕಳೆದುಕೊಂಡಿದ್ದಾರೆ. ಮಿತ್ರ ಪಕ್ಷವಾಗಿರುವ ಎಂ ಕ್ಯೂ ಎಂ ತನ್ನ ನಿಷ್ಠೆ ಬದಲಾಯಿಸಿದೆ. ಪ್ರತಿಪಕ್ಷಗಳ ಜತೆ ಕೈ ಜೋಡಿಸಲು ತೀರ್ಮಾನಿಸಿದೆ. ಇದರಿಂದಾಗಿ ಪಾಕಿಸ್ತಾನ ಸಂಸತ್ತಿನ ಕೆಳಮನೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದೆ. ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಮಂಡಿಸಲಾಗಿರುವ ಅವಿಶ್ವಾಸ ಗೊತ್ತುವಳಿ ಕುರಿತಂತೆ ಮತ ಚಲಾವಣೆ ಬಾಕಿ ಇರುವಾಗಲೇ ಈ ಬೆಳವಣಿಗೆ ಸಂಭವಿಸಿದೆ. ಪಾಕಿಸ್ತಾನದಲ್ಲಿ ಯಾವುದೇ ಚುನಾಯಿತ ಸರ್ಕಾರ ಇದುವರೆಗೆ ಐದು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ಉದಾಹರಣೆ ಇಲ್ಲ. ವಿದೇಶಿ ಶಕ್ತಿಗಳು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿವೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದಾರೆ.