• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವೇ ಬದಲಾವಣೆ..! ಸಿ.ಎಮ್ ಸಿದ್ದರಾಮಯ್ಯ..

      ಸಾಮೂಹಿಕ ಸರಳ ವಿವಾಹದಲ್ಲಿ..

      September 27, 2023
      0
      ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವೇ ಬದಲಾವಣೆ..! ಸಿ.ಎಮ್ ಸಿದ್ದರಾಮಯ್ಯ..
      0
      SHARES
      747
      VIEWS
      Share on FacebookShare on TwitterShare on whatsappShare on telegramShare on Mail

      ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ: ಸಿಎಂ ಮಹತ್ವದ ಘೋಷಣೆ..

      ಹನೂರು ಸೆ 26: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

      ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು. ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

      ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

      ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಬೆಲೆ ಏರಿಕೆಯಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರು ಜೀವನ ನಡೆಸಲು ತುಂಬಾ ಕಷ್ಟದ ಪರಿಸ್ಥಿತಿ ಉಂಟಾಗಿದೆ ಅದಕ್ಕಾಗಿಯೇ ನಮ್ಮ ಸರ್ಕಾರ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ಹಣವನ್ನು ನೀಡುತ್ತಿದೆ ಎಂದು ತಿಳಿಸಿದರು. ಶ್ರೀ ಮಲೆ ಮಹದೇಶ್ವರ ಬೆಟ್ಟ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು ಈ ಪವಿತ್ರ ಸ್ಥಳದಲ್ಲಿ ಸುಚಿತ್ವವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಪ್ರಾಧಿಕಾರ ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು  ಮುಖ್ಯಮಂತ್ರಿ ತಿಳಿಸಿದರು.

      ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ, 1989ರಿಂದ ಸಾಮೂಹಿಕ ವಿವಾಹ ನಡೆಯುತ್ತಿದ್ದು ಇಲ್ಲಿಯವರೆಗೆ 1830 ಜೋಡಿಗಳಿಗೆ ವಿವಾಹವನ್ನು ಮಾಡಲಾಗಿದೆ ಇಂದು ಶ್ರೀ ಕ್ಷೇತ್ರದಲ್ಲಿ 37 ನವ ವಧು ವರರಿಗೆ ಸಾಮೂಹಿಕ ವಿವಾಹ ಜರಗಿದ್ದು ಸಂತೋಷಕರವಾಗಿದೆ ಎಂದು ತಿಳಿಸಿದರು.

      ಹನೂರು ವಿಧಾನಸಭಾ ಕ್ಷೇತ್ರವು ಭೌಗಳೀಕವಾಗಿ ವಿಸ್ತೀರ್ಣ ಹೊಂದಿದ್ದು, ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶಗಳಿಂದ ಕೂಡಿದೆ.ಈ ಭಾಗದಲ್ಲಿ ನೂರಕ್ಕೂ ಹೆಚ್ಚು ಸೋಲಿಗರ ಹಾಡಿಗಳು ಇದ್ದು, ಕೃಷಿಯನ್ನೇ ನಂಬಿ ಕಡುಬಡವರು ಹೆಚ್ಚಿನ ಸಂಖ್ಯೆಯಲ್ಲಿ ಜೀವನ ನಡೆಸುತ್ತಿದ್ದಾರೆ ಹೀಗಾಗಿ ಕ್ಷೇತ್ರ ಅಭಿವೃದ್ಧಿ ಹಾಗೂ ಜನರ ಹಿತ ದೃಷ್ಟಿಯಿಂದ ಶಿಕ್ಷಣ ಸೇರಿದಂತೆ ಕುಡಿಯುವ ನೀರು, ವಿದ್ಯುತ್ ಪೂರೈಕೆ ಹಾಗೂ ಅಗತ್ಯ ಮೂಲ ಸೌಕರ್ಯ ಅಗತ್ಯವಾಗಿದೆ ಇದಕ್ಕೆ ಅನುದಾನ ಬೇಕಾಗಿದೆ ಎಂದರು.

      ರಾಜ್ಯದ ಗಡಿ ಭಾಗದಲ್ಲಿರುವ ಹನೂರು ತಾಲೂಕಿನ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಮೇಲ್ದಾರ್ಜೆ ಗೆ ಏರಿಸಬೇಕು, ನೀರಾವರಿ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮೀಣ ಭಾಗಗಳಲ್ಲಿ ರಸ್ತೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು, ಈ ಅಭಿವೃದ್ಧಿ ಕಾರ್ಯಕ್ಕೆ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಅಗತ್ಯವಾಗಿದೆ ಹೀಗಾಗಿ ಮುಖ್ಯಮಂತ್ರಿಗಳು ಅನುದಾನವನ್ನು ಒದಗಿಸಿಕೊಡಬೇಕು ಅಲ್ಲದೆ ಈ ಭಾಗದ ಸೋಲಿಗರ ಜೀವನಕ್ಕೆ ಕಟ್ಟಿಕೊಡಬೇಕು ಎಂದರಲ್ಲದೆ ಈ ಹಿಂದೆ ಹಲವು ಯೋಜನೆಗಳು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದರು ಸಹ ಕೆಲವು ಇನ್ನೂ ಸಂಪೂರ್ಣ ಅಭಿವೃದ್ಧಿ ಹೊಂದಿಲ್ಲ, ಹೀಗಾಗಿ ಸರ್ಕಾರದಿಂದ ನೀಡಿರುವ ಅನುದಾನದ ಜೊತೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಬೇಕು ಇದರಿಂದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.

      ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ, ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಗಳಾದ ಪುಟ್ಟರಂಗಶೆಟ್ಟಿ ಎ ಆರ್ ಕೃಷ್ಣಮೂರ್ತಿ ಹೆಚ್ ಎಂ ಗಣೇಶ್ ಪ್ರಸಾದ್ ವಿಧಾನ – ಪರಿಷತ್ ಸದಸ್ಯರಾದ ಮರಿತಿಬ್ಬೆಗೌಡ ಡಾಕ್ಟರ್ ತಿಮ್ಮಯ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಅರ್ಚನ ಜಿಲ್ಲಾಧಿಕಾರಿಯದ ಶಿಲ್ಪನಾಗ್ ಪೊಲೀಸ್ ಅಧೀಕ್ಷಕ ಪದ್ಮಿನಿಸಾಹು, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

      ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ

      ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.

      Tags: #CM Siddaramay#Ganarel Marrage#HanuruCongress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.