ವಿಜಯಪುರ: ಗುಮ್ಮಟನಗರಿಯ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಮೇಲೆ ನಾಲ್ವರು ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸಮರ್ಥ ಸಿಂದಗಿ ಸೇರಿದಂತೆ ನಾಲ್ವರು ಕ್ಷುಲ್ಲಕ ಕಾರಣಕ್ಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಮೇಲೆ ಹಲ್ಲೆಗೈದಿದ್ದಾರೆ.
ಹಲ್ಲೆಗೊಳಗಾದ ಆಯುಕ್ತರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ಶಿಫ್ಟ್ ಆಗಿದ್ದಾರೆ. ಇನ್ನೂ ಸಮರ್ಥ ಸಿಂದಗಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಮೂವರು ಆರೋಪಿಗಳು ಪರಾರಿಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆದರ್ಶನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.