ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಚಂದ್ರಯಾನ 3 ಲ್ಯಾಂಡಿಂಗ್ ವೀಕ್ಷಣೆ ..
ಕೊಳ್ಳೇಗಾಲ : ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಎಲ್ ಇ ಡಿ ಸ್ಕ್ರೀನ್ ಗಳ ಮೂಲಕ ಚಂದ್ರಯಾನ 3 ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.
ಬಾಹ್ಯಾಕಾಶ ಸಂಶೋಧನಾ ಕೇಂದ್ರ ಗಳಲ್ಲಿ ನಾಲ್ಕು ರಾಷ್ಟ್ರಗಳು ಚಂದ್ರಯಾನವನ್ನು ಯಶಸ್ವಿ ಗೊಳಿಸಿದ್ದು ಅದರಲ್ಲಿ ನನ್ನ ರಾಷ್ಟ್ರ ಭಾರತ ಸಹ ಇದೆ ಎಂದು ಹೆಮ್ಮೆಯಿಂದ ಹೇಳಬಹುದು.
ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕಾರ್ಯದರ್ಶಿಗಳಾದ ಡಾ. ಎಸ್. ದತ್ತೇಶ್ ಕುಮಾರ್ ರವರು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ಮಾಡಲಾಯಿತು. ಚಂದ್ರಯಾನ 3 ಪ್ರಕ್ರಿಯೆಯಲ್ಲಿ ತೊಡಗಿ ಯಶಸ್ವಿಗೊಳಿಸಿದ ಎಲ್ಲಾ ಇಸ್ರೋ ವಿಜ್ಞಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ಪ್ರಾಂಶುಪಾಲರುಗಳು ಮತ್ತು ಅಧ್ಯಾಪಕರುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.