ತೊಗರಿ ನಾಡಿನ ರೈತ ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ
ನೂತನ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ನಾಯಕೋಡಿ ಆಯ್ಕೆ.
ಅಫಜಲಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಫಜಲಪುರ ತಾಲೂಕು ಅಧ್ಯಕ್ಷರಾಗಿ ಮಂಜುನಾಥ್ ನಾಯ್ಕೊಡಿ ಅಯ್ಕೆಯಾಗಿದ್ದಾರೆ.
ಹೌದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಹಾಗೂ ಕಲಬುರಗಿ ಜಿಲ್ಲಾ ಅಧ್ಯಕ್ಷ ಮಲ್ಲಣಗೌಡ ಬಿ ಪಾಟೀಲ ಅವರ ನೇತೃತ್ವದಲ್ಲಿ ಅಫಜಲಪುರ ರೈತ ನೂತನ ಅಧ್ಯಕ್ಷರನ್ನಾಗಿ ಮಂಜುನಾಥ ನಾಯಕೋಡಿ ಅವರನ್ನು ಆಯ್ಕೆ ಮಾಡಿದರು. ಇನ್ನೂ ಪ್ರಧಾನ ಕಾರ್ಯದರ್ಶಿ – ಯಾಗಿ ಶ್ರೀಶೈಲ ಗೋಳೇ ಅವರನ್ನು ಮತ್ತು ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಹಾಂತೇಶ್ ಜಮಾದಾರ್ ಹಾಗೂ ನಾಗಪ್ಪ ಶ್ರೀಮಂತ ಹಡಲಗಿ ಜಿಲ್ಲಾ ಸಂಚಾಲಕರಾಗಿ ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಹಾಗೂ ತಾಲೂಕು ಅಧ್ಯಕ್ಷರು, ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.