ಹನೂರಿನ ಹಲವಡೆ ವಿದ್ಯುತ್ ವ್ಯತ್ಯಯ
ಹನೂರು: ಲೊಕ್ಕನಹಳ್ಳಿ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 20 ಮತ್ತು 21ರಂದು ವಿದ್ಯುತ್ ವ್ಯತ್ಯಾಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು ಉಪ ವಿಭಾಗದ 66/11 ಕಿವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮಗಳಾದ ಉದ್ದನೂರು, ಬೆಳ್ತೂರು ಮಾಲಿಂಗನ ಕಟ್ಟೆ, ನಿರಂತರ ಜ್ಯೋತಿ ಫಿಲ್ಟರ್ ಗಳ ವ್ಯಾಪ್ತಿಯಲ್ಲಿ ಎರಡು ದಿನಗಳ ವಿದ್ಯುತ್ ವ್ಯತ್ಯಾಯವಾಗಲಿದ್ದು ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕೆಂದು ತಿಳಿಸಿದ್ದಾರೆ.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.