ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ವ್ಯಕ್ತಿಯ ಬಂಧನ..!
ಹನೂರು: ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಗಳನ್ನು ಬೆಳೆದಿದ್ದ ಜಾಲಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಜೀರಿಗೆ ಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ
ಮಾದೇಶ ಬಿನ್ ದಾಸೇಗೌಡ (35) ಬಂಧಿತ ಆರೋಪಿ ಯಾಗಿದ್ದಾನೆ.
ಘಟನೆ ವಿವರ : ಹನೂರು ತಾಲೂಕಿನ ಜೀರಿಗೆ ಗದ್ದೆ ಗ್ರಾಮದ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೆರೆಗೆ ಹನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಶಿಕುಮಾರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ಮಾಡಿ ದಾಳಿ ನಡೆಸಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ದಾಳಿಯಲ್ಲಿ ಸುಮಾರು 14 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ದಾಳಿಯಲ್ಲಿ ಮುಖ್ಯ ಪೇದೆಗಳಾದ ರಾಘವೇಂದ್ರ ,ದೊಡ್ಡ ವೀರಶೆಟ್ಟಿ, ಚಂದ್ರು ಪೇದೆಗಳಾದ ಶಿವಕುಮಾರ್, ರಾಮಕೃಷ್ಣ, ರಾಜು, ಸಂತೋಷ್ , ತಾಲೂಕು ವೈದ್ಯಧಿಕಾರಿಗಳಾದ ಡಾ.ಪ್ರಕಾಶ್ ಹಾಗೂ ಹನೂರು ಠಾಣೆಯ ಸಿಬ್ಬಂದಿಗಳು ಇದ್ದರು.