ಲಿಂಗಸೂಗೂರ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಾ ಎನ್ನುವ ಕಾರ್ಯಕರ್ತನನ್ನು ನಾಲ್ಕೈದು ಜನರ ಹಂತಕರ ಗುಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ನಡೆದಿತ್ತು. ಈ ಹಿನ್ನಲೆಯಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಭೀಕರ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ವಿವಿಧ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಹರ್ಷನನ್ನು ಹತ್ಯೆಗೈದ ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.