ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮಾಡುವ ಕುರಿತು ಬಹು ದಿನಗಳಿಂದ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಪಾದಯಾತ್ರೆಯನ್ನು ಮಾಡೇ ಮಾಡ್ತಿವಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. 10 ದಿನಗಳ ವರೆಗೆ ಪಾದಯಾತ್ರೆ ಕೈಗೊಂಡು ಸರ್ಕಾರವನ್ನು ಎಚ್ಚರಿ ಸುವಂತಹ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ,ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದರೆ ಕರೋನಾ ನಿಯಮಗಳನ್ನು ಪಾಲಿಸಿ ಮೇಕೆದಾಟು ಕಾಮಗಾರಿ ಪಾದಯಾತ್ರೆ ಮಾಡಲಾಗುವದು. ಸರ್ಕಾರ ನಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತದಯೋ ತೆಗೆದುಕೊಳ್ಳಲಿ ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದಿದ್ದಾರೆ.