ಲಿಂಗಸೂಗೂರು: ಕನ್ನಡ ಧ್ವಜವನ್ನು ಸುಟ್ಟು ಹಾಕಿ ಅಪಮಾನ ಗೊಳಿಸಿದ “ ಶಿವಸೇನೆ ” ಮತ್ತು “ಎಮ್.ಇ.ಎಸ್, ಕಿಡಿಗೇಡಿಗಳನ್ನು ಶೀಘ್ರದಲ್ಲಿ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಲಿಂಗಸೂಗೂರು ಹಡಪದ ಅಪ್ಪಣ್ಣ ಯುವಕ ಸಂಘದ ಸಹಯೋಗದಲ್ಲಿ ಮುದಗಲ್ ಪಟ್ಟಣದಿಂದ ಲಿಂಗಸೂಗೂರು ಸಹಾಯಕ ಆಯುಕ್ತರ ಕಚೇರಿ ವರೆಗೆ ಸಂಘಟನೆಯ ಪದಾಧಿಕಾರಿಗಳು ಪಾದಯಾತ್ರೆ ನಡೆಸಿದರು.
ಅಷ್ಟೇ ಅಲ್ದೆ ಕನ್ನಡಿಗರ ಮೇಲೆ ಹಾಕಿರುವ ಕೊಲೆ ಪ್ರಯತ್ನ ಪ್ರಕರಣವನ್ನು ತೆಗೆದು ಹಾಕಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳನ್ನು ಶೀಘ್ರದಲ್ಲಿ ಬಂಧಿಸಬೇಕು ಇಲ್ಲವಾದಲ್ಲಿ ಮುಂದಿನ ದಿನ ಮಾನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಮಾಡಬೇಕಾಗುತ್ತೆ ಎಂದು ಸಂಘಟನೆಯ ಅಧ್ಯಕ್ಷ ಶರಣು ತಿಳಿಸಿದರು.