ಇಂಡಿ : ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್‌ನಿಂದ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಕೇಸರಿ ಧ್ವಜ ರಾಷ್ಟ್ರೀಯ ಧ್ವಜವನ್ನು ಮಾಡುತ್ತೇವೆ ಎಂದು ಹೇಳಿಕೆ ನೀಡಿದ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ, ಕೆಂಪು ಕೋಟೆಯ ಮೇಲೆ ಹಾರಾಡುತ್ತದೆ ಎಂದಿರುವುದು ಖಂಡನೀಯ. ಅದಕ್ಕಾಗಿ ಸಚಿವ ಕೆಎಸ್ಈ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ್ ಬೋರಾಮಣಿ, ಕೆಪಿಸಿಸಿ ಸದಸ್ಯ ಮಲ್ಲನಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಬಿದರಕೋಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಅವಿನಾಶ ಬಗಲಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ ಕಾಳೆ, ಮುಖಂಡ ಜೆಟ್ಟೆಪ್ಪ ರವಳಿ, ಜೀತಪ್ಪ ಕಲ್ಯಾಣಿ, ಹುಚ್ಚಪ್ಪ ತಳವಾರ, ನಿರ್ಮಲಾ ತಳಕೇರಿ, ಬಾಬು ಗುಡಮಿ ಮತ್ತು ಪುರಸಭೆ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.