ಜನರಲ್ಲಿ ಸಂವಿಧಾನ ಜಾಗೃತಿ ಮೂಡಿಸುವ ಜಾಥಕ್ಕೆ ಸಚಿವ ಎಮ್ ಎಬಿ ಪಾಟೀಲ್ ಚಾಲನೆ..
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಜ.26ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇಂದಿನಿಂದ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸಂವಿಧಾನದ ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಎಸಿ ಮಲ್ಟಿ ಎಕ್ಸಲ್ ವೊಲ್ಲೋ ಸ್ವೀಪರ್ ಬಸ್ಸಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಮೇಯರ್ ಮಹೇಜಬಿನ ಹೋರ್ತಿ, ಉಪ ಮೇಯರ್ ದಿನೇಶ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವ- ರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ,
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಕೆಕೆರಿಸಿಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.