ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಸಚಿವ ಎಮ್ ಬಿ ಪಾಟೀಲ
ವಿಜಯಪುರ: ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಇಂದು ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ ಹೋಲಿಸಿದರೆ ಇಂದಿನ ತಂತ್ರಜ್ಞಾನ ಅನುಕೂಲವಾಗಿದೆ. ಛಾಯಾಗ್ರಾಹಕರ ಬೇಡಿಕೆಯಾದ ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಛಾಯಾಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಎಚ್. ಎಸ್. ನಾಗೇಶ, ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
Minister MBP Photographers Exhibition Inauguration
ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
Minister MBP Photographers Exhibition Inauguration:
ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
3 Minister MBP Photographers Exhibition Inauguration:
ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.
4 and 5 Minister MBP Photographers Exhibition Inauguration:
ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿ ಫೋಟೋ ಕ್ಲಿಕ್ಕಿಸಿ ಗಮನ ಸೆಳೆದರು.