• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗುಮ್ಮಟ ನಗರಿಯಲ್ಲಿ 2024 ಕ್ಕೆ ಲೋಹದ ಹಕ್ಕಿ ಹಾರಾಟ

      ಸಚಿವ ಎಮ್.ಬಿ ಪಾಟೀಲ..

      July 29, 2023
      0
      ಗುಮ್ಮಟ ನಗರಿಯಲ್ಲಿ 2024 ಕ್ಕೆ ಲೋಹದ ಹಕ್ಕಿ ಹಾರಾಟ
      0
      SHARES
      261
      VIEWS
      Share on FacebookShare on TwitterShare on whatsappShare on telegramShare on Mail

      ಸಚಿವ ಡಾ.ಎಂ.ಬಿ.ಪಾಟೀಲರಿಂದ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ..

      2024ರ ಏಪ್ರಿಲ್‍ನಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ : ನೈಟ್ ಲ್ಯಾಂಡಿಗ್‍ಗೂ ಅವಕಾಶ..

      ವಿಜಯಪುರ : ನಿರ್ಮಾಣ ಹಂತದಲ್ಲಿರುವ ಇಲ್ಲಿನ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು, 2024ರ ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಕಾಮಗಾರಿಗಳನ್ನು ವೇಗವಾಗಿ ಕೈಗೊಂಡು ಎಲ್ಲ ಸಿವ್ಹಿಲ್ ಕಾಮಗಾರಿ, ಉಪಕರಣಗಳ ವ್ಯವಸ್ಥೆ ಹಾಗೂ ನಿರಾಪೇಕ್ಷಣಾ ಪತ್ರ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಫೆಬ್ರುವರಿ ಮಾಹೆಯಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಮೂಲಸೌಲಭ್ಯ ಅಭಿವೃದ್ಧಿ ಖಾತೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಡಾ.ಎಂ.ಬಿ. ಪಾಟೀಲ ತಿಳಿಸಿದರು.

      ಅವರು ಶುಕ್ರವಾರ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಸಮಗ್ರವಾಗಿ ಪರಿಶೀಲಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 727 ಎಕರೆ ವಿಸ್ತೀರ್ಣದಲ್ಲಿ ತಲೆಯೆತ್ತುತ್ತಿರುವ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳು ಈ ವರ್ಷದ ಡಿಸೆಂಬರ್‍ವರೆಗೆ ಮುಗಿಯಲಿವೆ. ಅದರ ನಂತರ ಇತರ ತಾಂತ್ರಿಕ ಕೆಲಸಗಳು ನಡೆದು ಏಪ್ರಿಲ್ ವೇಳೆಗೆ ಎಲ್ಲವೂ ಮುಗಿಯುವ ವಿಶ್ವಾಸ ಇದೆ ಎಂದು ಹೇಳಿದರು.

      ಈ ಹಿಂದೆ ಬೆಳಗಿನ ಹೊತ್ತು ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಆದರೆ ನಾನು ಸಚಿವನಾದ ನಂತರ ರಾತ್ರಿ ಹೊತ್ತು ಕೂಡ ವಿಮಾನ ಬಂದಿಳಿಯುವ ಹಾಗೆ ಸೌಲಭ್ಯಗಳನ್ನು ಕಲ್ಪಿಸಲು ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಅಳವಡಿಸುವಂತೆ ನಿರ್ದೇಶನ ನೀಡಿದ್ದೇನೆ. ಇದಷ್ಟೇ ಅಲ್ಲದೇ ಏರ್ ಬಸ್ ಮಾದರಿಯ ದೊಡ್ಡ ವಿಮಾನಗಳು ಕೂಡ ಇಲ್ಲಿಗೆ ಬಂದಿಳಿಯಲು ಅನುಕೂಲವಾಗುವ ಹಾಗೆ ಯೋಜನೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಅವರು ತಿಳಿಸಿದರು.

      ಕಾಮಗಾರಿಗಳು ತಾಂತ್ರಿಕ ಕಾರಣಗಳಿಂದ ನಿಲ್ಲಬಾರದೆಂಬ ಉದ್ದೇಶದಿಂದ ಎರಡು ದಿನಗಳ ಹಿಂದೆ ಈ ಯೋಜನೆಗೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ಶೌಚಾಲಯ, ಕ್ಯಾಂಟೀನ್ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ದೊಡ್ಡ ವಿಮಾನ ನಿಲ್ದಾಣದಲ್ಲಿ ಇರುವಂತೆಯೇ ಇರಲಿದೆ. ಜತೆಗೆ ಏರ್ ಬಸ್ ಮಾದರಿಯ ವಿಮಾನಗಳು ಬಂದಿಳಿಯಲು ಅಗತ್ಯವಿರುವ ಭೂಸ್ವಾಧೀನ ಕೂಡ ನಡೆಯಲಿದ್ದು, ಈ ಸಂಬಂಧ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಅವರು ವಿವರಿಸಿದರು.

      ಡಿಜಿಸಿಎ ಮಾನದಂಡಗಳ ಪ್ರಕಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಎರಡು ವಿಮಾನ ರಕ್ಷಣಾ ಅಗ್ನಿಶಾಮಕ ವಾಹನಗಳು ಅಗತ್ಯವಿವೆ. ರಾತ್ರಿ ವೇಳೆ ಇಳಿಯುವ ಸೌಲಭ್ಯ ಕಲ್ಪಿಸಲು ಬೇಕಾಗುವ ಉಪಕರಣಗಳ ಸಂಗ್ರಹಣೆಗೆ ಕೂಡ ಸ್ಪಷ್ಟ ನಿರ್ದೇಶನ ಕೊಡಲಾಗಿದೆ. ಇದರ ಜತೆಗೆ ಹವಾಮಾನ ಕುರಿತ ಮಾಹಿತಿ ನೀಡುವ ಉಪಕರಣಗಳನ್ನು ಅಳವಡಿಸಬೇಕಾಗಿದೆ. ಈ ಎಲ್ಲದಕ್ಕೂ ಅಂದಾಜು 50 ಕೋಟಿ ರೂಪಾಯಿ ಬೇಕಾಗುತ್ತದೆ. ಹೀಗಾಗಿ ವಿಮಾನ ನಿಲ್ದಾಣದ ಅಂದಾಜು ವೆಚ್ಚ 400 ಕೋಟಿ ರೂ. ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

      ಇದುವರೆಗೂ 300 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಸರ ಇಲಾಖೆಯ ಅನುಮತಿಗಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ಬಂದಿರುವುದರಿಂದ ಈ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ. ಜತೆಗೆ ಕೇಂದ್ರ ಸರ್ಕಾರದ ಮಲ್ಟಿ ಡಿಸಿಪ್ಲಿನರಿ ತಂಡದಿಂದ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸುವಂತೆ ಕೋರಲಾಗಿದ್ದು, ಈ ತಂಡವು ಆಗಸ್ಟ್ ತಿಂಗಳಲ್ಲಿ ವಿಜಯಪುರಕ್ಕೆ ಭೇಟಿ ನೀಡಬಹುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

      ವಿಮಾನ ನಿಲ್ದಾಣದ ಕಾಮಗಾರಿಗಳು ಒಟ್ಟು ಮೂರು ಪ್ಯಾಕೇಜ್‍ಗಳಲ್ಲಿ ನಡೆಯುತ್ತಿವೆ. ಪ್ಯಾಕೇಜ್-1ರಲ್ಲಿ 222.92 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಪೆರಿಫೆರಲ್ ರಸ್ತೆ, ಏಪ್ರಾನ್, ಟ್ಯಾಕ್ಸಿವೇ, ರಸ್ತೆಗಳ ಕೆಲಸ ನಡೆಯುತ್ತಿದೆ.

      ಪ್ಯಾಕೇಜ್-2ರಲ್ಲಿ 86.20 ಕೋಟಿ ರೂ. ವೆಚ್ಚದಲ್ಲಿ ಪ್ಯಾಸೆಂಜರ್ ಟರ್ಮಿನಲ್, ಎಟಿಸಿ ಕಟ್ಟಡ, ವಿದ್ಯುತ್ ಉಪಕೇಂದ್ರ, ಕಾಂಪೌಂಡ್, ವೀಕ್ಷಣಾ ಗೋಪುರ, ಅಂಡರ್ ಗ್ರ್ರೌಂಡ್ ಟ್ಯಾಂಕ್ ಕಾಮಗಾರಿ ಪ್ರಗತಿಯಲ್ಲಿದೆ. ಪ್ಯಾಕೇಜ್-3ರಲ್ಲಿ 19.30 ಕೋಟಿ ರೂ. ವಿನಿಯೋಗಿಸಿ ಎಲೆಕ್ಟ್ರೋ-ಮೆಕ್ಯಾನಿಕಲ್ ಸಾಧನಗಳ ಕೆಲಸ ಚಾಲ್ತಿಯಲ್ಲಿದೆ. ಅದರಂತೆ ವಿದ್ಯುತ್ ಪೂರೈಕೆ, ಸರ್ವೇ ಇತ್ಯಾದಿ ಕೆಲಸಗಳಿಗಾಗಿ 19.41 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಹೇಳಿದರು.
      ವಿಮಾನ ನಿಲ್ದಾಣ

      ಸರ್ಕಾರದಿಂದ ನಿರ್ವಹಣೆಗೆ ಚಿಂತನೆ : ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳು ಪೂರ್ಣಗೊಂಡ ನಂತರ ರಾಜ್ಯ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಚಿಂತಿಸಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹಲವು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ಕೇಂದ್ರ ಸರಕಾರ ಹಣ ಕೊಟ್ಟಿಲ್ಲ. ಎಲ್ಲದಕ್ಕೂ ರಾಜ್ಯ ಸರ್ಕಾರವೇ ಹಣ ನೀಡಿದೆ. ಹೀಗಾಗಿ ಭಾರತೀಯ ವಿಮಾನ ಪ್ರಾಧಿಕಾರಕ್ಕೆ ನಿರ್ವಹಣೆ ವಹಿಸುವುದರಲ್ಲಿ ಅರ್ಥ ಇಲ್ಲ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಸಾಧಕ-ಬಾಧಕ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

      ಜಿಲ್ಲೆಯ ವಾಣಿಜ್ಯ ಬೆಳೆಗಳ ರಫ್ತಿಗೆ ಸಹಕಾರ :

      ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ನಂತರ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ದ್ರಾಕ್ಷಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ರಫ್ತಿಗೂ ಅನುಕೂಲವಾಗಲಿದೆ. ಅದರಂತೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಒತ್ತು ನೀಡಿ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

      ಈ ಸಂದರ್ಭಧಲ್ಲಿ ನಾಗಠಾಣ ಶಾಸಕರಾದ ಶ್ರೀ ವಿಠಲ ಕಟಕದೊಂಡ, ಕೆಎಸ್ ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್ ರವಿ, ಜಿಲ್ಲಾಧಿಕಾರಿಗಳಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #MBPatil#Plan start 2024vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.