ಇಂಡಿ : ಪಂಚಮಸಾಲಿ 2ಎ ಮೀಸಲಾತಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಪಂದಿಸುವ ಕೆಲಸ ಮಾಡುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಭಾ ಭವನದಲ್ಲಿ ಮಾಧ್ಯಮ ಗೋಷ್ಟಿ ಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಂಚಮಸಾಲಿ ಮೀಸಲಾತಿಗಾಗಿ ಹತ್ತು ಹಲವು ಹೋರಾಟ ಮಾಡಲಾಗಿದೆ. ಅಲ್ಲದೇ, ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೀಸಲಾತಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು. ಇನ್ನೂ ಪಂಚಮಸಾಲಿ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದು, ಅದಕ್ಕಾಗಿ ಬರುವ ಜನವರಿ 14 ರಂದು ಕೂಡಲಸಂಗಮದಲ್ಲಿ ಶ್ರೀ ಪೀಠದಲ್ಲಿ ಪಂಚಮಸಾಲಿ ವರ್ಷಾಚರಣೆ ಹಾಗೂ ಜಾಗರಣೆ ಕಾರ್ಯಕ್ರಮ ನಡೆಯಲಿದೆ. ಇದು ಸಂಭ್ರಮದ ಕಾರ್ಯಕ್ರಮವಲ್ಲ, ಸಂಕಷ್ಟದ ಕಾರ್ಯಕ್ರಮ ಎಂದು ಹೇಳಿದರು. ಇನ್ನೂ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.