ಸ್ವಭಾವ ಸ್ವಚ್ಚತೆ ಹಾಗೂ ಸಂಸ್ಕಾರ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್
ಹನೂರು :ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಹನೂರು ಸಮ್ಮುಖದಲ್ಲಿ ” ಸ್ವಭಾವ ಸ್ವಚ್ಚತೆ,ಸಂಸ್ಕಾರ ಸ್ವಚ್ಚತೆ” ಕಾರ್ಯಕ್ರದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದದರು.
ಹನೂರು: ಪಟ್ಟಣದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿ.ಪಂ.ಚಾಮರಾಜನಗರ, ತಾ.ಪಂ.ಹನೂರು ಇವರ ವತಿಯಿಂದ ಏರ್ಪಡಿಸಲಾಗಿದ್ದ ಸ್ವಚತೆಯೇ ಸೇವೆ 2024 ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಚ್ಛತೆ ಪ್ರತಿ ಮನೆಯಿಂದ ಪ್ರಾರಂಭವಾಗಬೇಕು ಶಾಲಾ ಕಾಲೇಜುಗಳಲ್ಲಿ ಇದು ಒಂದು ಧ್ಯೇಯ ವಾಕ್ಯವಾಗಬೇಕು ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರ ಸೇವೆ ಅನನ್ಯ. ಸಾರ್ವಜನಿಕ ಆಯಾ ಗ್ರಾಮ ಪಟ್ಟಣ ನಗರಗಳಲ್ಲಿ ಹಸಿ ಕಸ, ಒಣ ಕಸ, ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು. ಹನೂರು ಪ.ಪಂ.ಹಾಗೂ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸಲು ಸೂಚಿಸಿದ್ದೇನೆ. ಇತ್ತೀಚಿಗೆ ಜಿಲ್ಲೆಯಲ್ಲಿ ಪ್ರಥಮವಾಗಿ ಬೂದು ನಿರ್ವಹಣಾ ಯೋಜನೆಯ 9 ಕೋಟಿ ರೂ.ಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯ ಉದ್ದೇಶ ಚರಂಡಿ ಮತ್ತು ಕಲುಷಿತ ನೀರನ್ನು ಶುದ್ದಿಗೊಳಿಸಿ ಕೆರೆ ಕಟ್ಟೆ ನದಿಗಳಿಗೆ ಬಿಡುವುದಾಗಿದೆ ಜೊತೆಗೆ ತ್ಯಾಜ್ಯಗಳ ನಿರ್ವಹಣೆ ಮಾಡುವುದಾಗಿದೆ ಎಂದು ತಿಳಿಸಿದರು.
ಶಾಸಕ ಎಂ.ಆರ್.ಮಂಜುನಾಥ್ ಸಾಂಕೇತಿಕವಾಗಿ ಪೌರ ಕಾರ್ಮಿಕರೊಡನೆ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು. ಬಳಿಕ ಬಸ್ ನಿಲ್ದಾಣದ ಆವರಣದಲ್ಲಿ ಸಸಿ ನೆಟ್ಟು ನೀರೇದರು.
ಈ ಸಂದರ್ಭದಲ್ಲಿ ಪ.ಪಂ.ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದಕುಮಾರ್, ಸದಸ್ಯರಾದ ಹರೀಶ್, ಮಹೇಶ್ ನಾಯಕ, ಸಂಪತ್ ಕುಮಾರ್, ಸುದೇಶ್, ಸೋಮಶೇಖರ್, ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಪ.ಪಂ.ಮುಖ್ಯಾಧಿಕಾರಿ ಅಶೋಕ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ


















