ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಶಾಸಕ ಎಂಆರ್ ಮಂಜುನಾಥ್: ತಲಾ ₹15ಲಕ್ಷ ಪರಿಹಾರ
ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ
ಹನೂರು:ಶಾಸಕ ಎಂ.ಆರ್ ಮಂಜುನಾಥ್ ಭಾನುವಾರ ಪ್ರತಿಭಟನಾಕಾರರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.
ಅರಣ್ಯ ಇಲಾಖೆ ಸಿಬ್ಬಂದಿ ನಕಲಿ ಎನ್ಕೌಂಟರ್ ನಡೆಸಿ ಮೂವರನ್ನು ಕೊಂದು ಹಾಕಿದ್ದಾರೆ. ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ತಪ್ಪಿತಸ್ಥ ಸಿಬ್ಬಂದಿಗೆ ಕಠಿಣ ಶಿಕ್ಷೆಯಾಗಬೇಕು, ಮೃತರ ಕುಟುಂಬಗಳಿಗೆ ನ್ಯಾಯಯುತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು. ಅಲ್ಲಿಯವರೆಗೂ ಶವ ಪಡೆಯುವುದಿಲ್ಲ ಎಂದು ಸಂಬಂಧಿಗಳು ಪಟ್ಟು ಹಿಡಿದಿದ್ದಾರೆ.
ತಲಾ ₹15 ಲಕ್ಷ ಪರಿಹಾರ;ಹನೂರು ಶಾಸಕ ಎಂ.ಆರ್ ಮಂಜುನಾಥ್ ಭಾನುವಾರ ಪ್ರತಿಭಟನಾಕಾರರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.
ಬಳಿಕ ಮಾತನಾಡಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯ ಹೊಣೆಯನ್ನು ಮ್ಯಾಜಿಸ್ಟ್ರೇಟ್ಗೆ ವಹಿಸಿದೆ. ಆರ್ಎಫ್ಒ ಹಂತದ ಸಿಬ್ಬಂದಿ ಅಮಾನತಿಗೆ ಕ್ರಮ ಕೈಗೊಳ್ಳಲಿದೆ.
ಸರ್ಕಾರದಿಂದ ತಾತ್ಕಾಲಿಕವಾಗಿ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಜೊತೆಗೆ ವೈಯಕ್ತಿಕವಾಗಿ ₹10 ಲಕ್ಷ ಪರಿಹಾರ ನೀಡುವುದಾಗಿ ಶಾಸಕರು ಹೇಳಿದರು.
ಗುಂಡು ಹಾರಿಸಿದ ಪ್ರಕರಣ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನಿಖಾ ತಂಡವನ್ನೂ ರಚಿಸಲಾಗಿದ್ದು ವರದಿ ಸಲ್ಲಿಕೆಯಾದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.
















