ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಎಂ ಆರ್ ಮಂಜುನಾಥ್ .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿನ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಲು ತಿಳಿಸಿದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವಿಕ್ಷೀಸಿ ಶಾಸಕ ಮಂಜುನಾಥ್ ಭೇಟಿ ನೀಡಿದ ನಂತರ ಅಧಿಕಾರಿಗಳ ಜೊತೆ 512 ಕೊಠಡಿ ಕಾಮಗಾರಿ ಸೇರಿದಂತೆ ವಿವಿಧಡೆ ಹಾಗೂ ಸಾಮೂಹಿಕ ವಿವಾಹಕ್ಕೆ ಮುಖ್ಯಮಂತ್ರಿಗಳ ಆಗಮನ ಹಿನ್ನಲೆಯಲ್ಲಿ , ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಪ್ರತಿ ವರ್ಷ ಸಾಮೂಹಿಕ ವಿವಾಹ ಸಾಂಪ್ರದಾಯದಂತೆ ಆಗಸ್ಟ್ ತಿಂಗಳಲ್ಲಿ ನಡೆಯುವ ಸಾಮೂಹಿಕ ವಿವಾಹ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿರುವ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಸಚಿವರು ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳು ಬರಲಿದ್ದಾರೆ. ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಎಂದು ಸೂಚನೆ ನೀಡಿದರು.
ದೊಡ್ಡ ಕೆರೆ ಪರಿಶೀಲನೆ : ಮಲೆ ಮಾದೇಶ್ವರ ಬೆಟ್ಟದಲ್ಲಿರುವ ದೊಡ್ಡಕೆರೆ ಕೊಳವನ್ನು ಸಹ ವೀಕ್ಷಣೆ ಮಾಡಿ ಕೆರೆ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಜೊತೆಗೆ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿ ಸಿಬ್ಬಂದಿ ವರ್ಗ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪೌರಕಾರ್ಮಿಕರ ಜೊತೆ ಮಾತುಕತೆ : ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಜೊತೆ ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ ಮಲೆ ಮಾದೇಶ್ವರ ಬೆಟ್ಟದ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಭಕ್ತಾದಿಗಳಿಗೆ ಅನುಕೂಲ ಮಾಡಬೇಕಾಗಿ ಸೂಚನೆ ನೀಡಿದರು.
ದೊಡ್ಡ ಕೆರೆಯ ಹತ್ತಿರವಿರುವ ನಂದನ ವನವನ್ನು ಅಭಿವೃದ್ಧಿ ಪಡಿಸುವುದರ ಬಗ್ಗೆ ಸ್ಥಳವನ್ನು ಪರಿಶೀಲನೆ ನಡೆಸಿದರು ಮುಂಭಾಗದಲ್ಲಿ ತಂತಿ ಬೇಲಿ ನಿರ್ಮಿಸಲು ಸಹ ಸೂಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಪಿಡಬ್ಲ್ಯೂಡಿ ಸಹಾಯಕ ಇಂಜಿನಿಯರ್ ಸಂತೋಷ್,ಜೂನಿಯರ್ ಇಂಜಿನಿಯರ್ ಸೆಲ್ವಗಣಪತಿ ಗುತ್ತೇದಾರರು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.