ರೂ.5 ಕೋಟಿ ಮೊತ್ತದ ಕಾಮಗಾರಿಗೆ ಶಾಸಕ ಯತ್ನಾಳ ಭೂಮಿಪೂಜೆ
ವಿಜಯಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಈಚೆಗೆ ಭೂಮಿಪೂಜೆ ನೆರವೇರಿಸಿದರು.
2023-24ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ರೂ.5 ಕೋಟಿ ಅನುದಾನದಲ್ಲಿ ಯೋಗ ಕೇಂದ್ರ ನಿರ್ಮಾಣ, ತರಗತಿ ಕೊಠಡಿಗಳು, ಶೌಚಾಲಯ ಬ್ಲಾಕ್ ಮತ್ತಿತರೆ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಇದೇ ವೇಳೆ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಅಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


















